ಕೋಲಾರ

ಮುನೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ತಿಂಗಳ ಹುಣ್ಣಿಮೆ ಕಾರ್ಯಕ್ರಮ

Published On :

ಚಿಂತಾಮಣಿ: ಆಧುನಿಕ ಯುಗದಲ್ಲಿ ಆಧ್ಯಾತ್ಮಿಕತೆ ಮರೆಯಾಗದಿರಲಿ, ಅದು ಸದಾಕಾಲ ಬೆಳಗಿ ಜನಸಮುದಾಯಕ್ಕೆ ಸನ್ಮಾರ್ಗವನ್ನು ತೋರುವಂತಾಗಲಿ ಎಂದು ಚಿಂತಾಮಣಿ ಎಪಿಎಂಸಿ ಮಾಜಿ ಅಧ್ಯಕ್ಷ ಕರುಟಹಳ್ಳಿ ಎಂ.ಕೃಷ್ಣಮೂರ್ತಿ ಹೇಳಿದರು.
ತಾ. ಬಡಗವಾರಹಳ್ಳಿ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ಏರ್ಪಡಿಸಲಾಗಿದ್ದ ತಿಂಗಳ ಹುಣ್ಣಿಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜನರು ಆಧ್ಯಾತ್ಮಿಕತೆಯಿಂದ ದೂರವಾಗುತ್ತಿದ್ದು ಅನೇಕ ಸಂಕಷ್ಟಗಳಿಗೆ ಈಡಾಗುತ್ತಿದ್ದಾರೆಂದು ಅಭಿಪ್ರಾಯ ಪಟ್ಟರು. ಮಕ್ಕಳಿಗೆ ಬಾಲ್ಯದಿಂದಲೇ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿದರೆ ಅವರಲ್ಲಿ ಸದ್ಗುಣಗಳು ನೆಲೆಯೂರಿ ಅವರ ಮುಂದಿನ ಭವಿಷ್ಯವೂ ಉಜ್ವಲಗೊಳ್ಳುವುದಲ್ಲದೆ ಸಮಾ ಜಕ್ಕೂ, ದೇಶಕ್ಕೂ ಒಳಿತಾಗುವುದೆಂದು ನುಡಿದರು. ಧರ್ಮದರ್ಶಿ ಕಾಗತಿ ವಿ.ವೆಂಕಟರತ್ನಂ  ಹುಣ್ಣಿಮೆ ಕಾರ್ಯಕ್ರಮದ ಕುರಿತು ತಿಳಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಕೃಷ್ಣಮೂರ್ತಿ ದೇಗುಲದ ಪರವಾಗಿ ಸನ್ಮಾನಿಸಿ ಗೌರವಿಸಿದರು. ಗ್ರಾಮದ ಸುನಂದಮ್ಮ,ನಾರಾಯಣಸ್ವಾಮಿ,ಪ್ರವೀಣ್,ಪ್ರದೀಪ್ ಕುಟುಂಬದವರಿಂದ ಪ್ರಸಾದ ಸೇವೆ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.