ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಆಗಿಲ್ಲ: ಡಾ. ಪರಮೇಶ್ವರ ಸ್ಪಷ್ಟನೆ
ಕ.ಪ್ರ.ವಾರ್ತೆ ಬೆಂಗಳೂರು ಜೂ. 25
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಗೊಂದಲ ಹೆಚ್ಚಾಗಿದ್ದು, ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಯ್ಯಶೆಟ್ಟಿ ಅವರನ್ನು ಇದುವರೆಗೆ ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರು ಕಾಂಗ್ರೆಸ್ಗೆ ಸೇರಿದ್ದಾರೆ ಎಂಬುದು ಸುಳ್ಳು ಎಂದು ಹೇಳಿದರು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರೇ ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆಂದು ಹೇಳಿಕೆ ನೀಡಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ವಿಚಾರ ನನಗೆ ಗೊತ್ತಿಲ್ಲ. ಸಾಮಾನ್ಯವಾಗಿ ಯಾವುದೇ ಮುಖಂಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಎಐಸಿಸಿಯ ಅನುಮತಿ ಬೇಕು. ನಮಲ್ಲಿ ಅಂಥ ಯಾವುದೇ ಪ್ರಸ್ತಾಪವಿಲ್ಲ ಎಂದರು.
ಕೃಷ್ಣಯ್ಯ ಶೆಟ್ಟಿಯವರ ವಿರುದ್ಧ ಕಾಂಗ್ರೆಸ್ ಕಳೆದ ಕೆಲ ವರ್ಷಗಳಿಂದ ಹೋರಾಟ ನಡೆಸಿದೆ. ಪಕ್ಷದ ಕಾರ್ಯಕರ್ತರು ಹಲವು ವೇದಿಕೆಗಳಲ್ಲಿ ಅವರ ಮೇಲಿನ ಆರೋಪದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಂಥವರನ್ನು ಪಕ್ಷಕ್ಕೆ ಕರೆ ತರುವುದು ಸಾಧ್ಯವಿಲ್ಲ. ಈ ಬಗ್ಗೆ ಕೋಲಾರ ಜಿಲ್ಲೆ ಕಾಂಗ್ರೆಸ್ ಅಧ್ಯಕ್ಷರಿಗೆ ಪಕ್ಷದ ವತಿಯಿಂದ ನೋಟಿಸ್ ನೀಡಲಾಗಿದ್ದು, ಅವರು ಅದಕ್ಕೆ ಉತ್ತರವನ್ನೂ ನೀಡಿದ್ದಾರೆ ಎಂದು ಹೇಳಿದ್ದಾರೆ.
ಗ್ರಾಹಕರಿಗೆ ವಂಚನೆ: ಕರವೇ ಪ್ರತಿಭಟನೆ
ಕ.ಪ್ರ.ವಾರ್ತೆ ಮಾಲೂರು ಜೂ. 25
ಗ್ರಾಹಕರು ಸಂಸ್ಥೆಯಲ್ಲಿಟ್ಟಿದ್ದ ಠೇವಣಿ ಸೇರಿದಂತೆ ಮೆಚ್ಯೂರಿಟಿಯಾಗಿದ್ದ ಹಣವನ್ನು ನಾಲ್ಕು ತಿಂಗಳಾದರೂ ವಾಪಸ್ ಮಾಡದಿರುವುದನ್ನು ಖಂಡಿಸಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ಇಲ್ಲಿನ ಗ್ರೀನ್ ಬಡ್ಸ್ ಅಗ್ರೋ ಫಾರಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ತಾಲೂಕಿನ ವಿವಿದ ವರ್ಗಗಳ ಗ್ರಾಹಕರು ಸಂಸ್ಥೆಯಲ್ಲಿಟ್ಟಿದ್ದ ಕೋಟ್ಯಂತರ ಹಣವನ್ನು ಠೇವಣಿ ಹಣವನ್ನು ಅವಧಿ ಮುಗಿದಿದ್ದರೂ ವಾಪಸ್ ಮಾಡದೆ ಬಡ ಗ್ರಾಹಕರನ್ನು ಸಂಸ್ಥೆ ವಂಚಿಸುತ್ತಿದೆ ಎಂದು ಆರೋಪಿಸಿದರು.
ಸಂಸ್ಥೆಯ ಎಂಡಿ ಬಿ.ಎಲ್.ರವೀಂದ್ರನಾಥ್ ಮೈಸೂರಿನಿಂದ ಫೋನಿನಲ್ಲಿ ಮಾತನಾಡಿ, ತಾಂತ್ರಿಕ ತೊಂದರೆಗಳಿಂದ ಹಣ ವಾಪಸ್ ಮಾಡುವ ಪ್ರಕ್ರಿಯೆ ವಿಳಂಬವಾಗಿದ್ದು, ಜುಲೈ ಒಂದರಂದು ಅವಧಿ ಮುಗಿದಿರುವ ಎಲ್ಲ ರೀತಿಯ ಠೇವಣಿ ಹಣವನ್ನು ವಾಪಸ್ ಮಾಡುವುದಾಗಿ ತಿಳಿಸಿದ ಮೇಲೆ ಪ್ರತಿಭಟನೆಯನ್ನು ಕೈ ಬಿಟ್ಟರು. ಕರವೇ ಅಧ್ಯಕ್ಷ ಮಂಜುನಾಥ್ ಗೌಡ ವಹಿಸಿದ್ದರು. ಸಂಘಟನೆಯ ಬಡಗಿ ಶ್ರೀನಿವಾಸ್, ಎಸ್.ಎಂ. ರಾಜು, ಪ್ರಸನ್ನ ಕುಮಾರ್, ನವೀನ್, ಚೆನ್ನಕೃಷ್ಣ, ರವಿ ಕುಮಾರ್, ಬಾಬು, ನಾರಾಯಣಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

