ಕೋಲಾರ

ಮಾಲೂರಲ್ಲಿ ಮಾದಕ ದ್ರವ್ಯ ವಿರೋಧಿ ಜಾಥಾ

Published On :

ಕ.ಪ್ರ. ವಾರ್ತೆ ಮಾಲೂರು ಜೂ.26
ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಸ್ಥಳೀಯ ಪೊಲೀಸ್ ಇಲಾಖೆಯು ಪಟ್ಟಣದಲ್ಲಿ ಮಾದಕ ದ್ರವ್ಯಗಳಿಂದ ಅಗುವ ಅನಾಹುತದ ಅರಿವು ಮೂಡಿಸುವ ಜಾಥಾವನ್ನು ಬುಧವಾರ ಹಮ್ಮಿಕೊಂಡಿತ್ತು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈ ಸಂಬಂಧ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣಪ್ಪ, ವಿದೇಶಿ ಸಂಸ್ಕೃತಿಯ ವ್ಯಾಮೋಹದಲ್ಲಿ ಬಿದ್ದಿರುವ ನಮ್ಮ ಯುವ ಜನಾಂಗವು ತಮಗೆ ಗೊತ್ತಿಲ್ಲದ ಹಾಗೆ ಮಾದಕ ದ್ರವ್ಯದ ವ್ಯಸನಿಗಳಾಗುತ್ತಿದ್ದಾರೆ. ಇದು ಅತಿ ಶ್ರೀಮಂತರ ಸಂಸ್ಕೃತಿಯ ಪ್ರತೀಕವೆಂದು ಭಾವಿಸುತ್ತಿದ್ದಾರೆ. ನಿತ್ಯ ಸಾವಿರಾರು ಯುವಕರು ಮಾದಕ ದ್ರವ್ಯಕ್ಕೆ ಬಲಿಯಾಗುತ್ತಿದ್ದು, ಅವರಲ್ಲಿ ಅರಿವು ಮೂಡಿಸಬೇಕಾಗಿದೆ.ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೇ ಅರಿವು ಮೂಡಿಸುವ ಮೂಲಕ ಮಾದಕ ದ್ರವ್ಯ ವಿರೋಧದ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಎಸ್‌ಐ ಮೋಹನ್ ರೆಡ್ಡಿ ಮಾತನಾಡಿದರು. ನಂತರ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳು ಪಟ್ಟಣದಲ್ಲಿ ಮಾದಕ ದ್ರವ್ಯ ವಿರೋಧಿಸಿ ಜಾಥಾ ನಡೆಸಿದರು. ಕ್ರೈಂ ಎಸ್‌ಐ ಮುನಿಶ್ಯಾಮಿ ನೀಲಕಂಠನ್,ಈರಣ್ಣ ಇದ್ದರು.

ಆರೋಗ್ಯ ಉಚಿತ ತಪಾಸಣೆ ಶಿಬಿರ
ಕ.ಪ್ರ. ವಾರ್ತೆ ಚಿಕ್ಕಬಳ್ಳಾಪುರ ಜೂ.26

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ಎಂ.ಎಸ್. ರಾಮಯ್ಯ ಆಸ್ಪತ್ರೆ ಹಾಗೂ ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.  
ಶಿಬಿರದಲ್ಲಿ ಪ್ರಸೂತಿ ಹಾಗೂ ಸ್ತ್ರೀರೋಗ ವಿಭಾಗ, ಹೃದಯರೋಗ ವಿಭಾಗ, ದಂತ ವೈದ್ಯರು, ಮಕ್ಕಳ ವೈದ್ಯರು, ಮೂಳೆ ರೋಗ ವಿಭಾಗ, ಕಣ್ಣಿನ ವಿಭಾಗ, ಕಿವಿ, ಮೂಗು, ಗಂಟಲು ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಸಾಮಾನ್ಯ ರೋಗ ವಿಭಾಗ, ಚರ್ಮರೋಗಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಲಾಯಿತು.  ನಗರ ಮತ್ತು ಗ್ರಾಮೀಣ ಪ್ರದೇಶದ ಸಾಮಾನ್ಯ ಜನ, ಆರ್ಥಿಕವಾಗಿ ಹಿಂದುಳಿದ ಮತ್ತು ಬಡತನ ರೇಖೆಗಿಂತ ಕೆಳಗಿರುವ ನೂರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಚಿಕಿತ್ಸೆಯ ಲಾಭ ಪಡೆದರು. ಚಿಕಿತ್ಸೆಯೊಂದಿಗೆ ಉಚಿತವಾಗಿ ಔಷಧಿ ವಿತರಿಸಲಾಯಿತು.

ಅಕ್ರಮ ಗಣಿಗಾರಿಕೆ ನಿಲ್ಲಿಸಲು ಮನವಿ
ಮುಳಬಾಗಲು:
ತಾಲೂಕಿನ ಹನುಮನಹಳ್ಳಿ ಗ್ರಾಮದ ಹೊರವಲಯದ ಸರ್ವೆ ನಂಬರ್103 ರಲ್ಲಿರುವ ಬೋಡಿ ಬಂಡೆಯಲ್ಲಿ ಅಕ್ರಮ ಗಣೆಗಾರಿಕೆ ನಡೆಯುತ್ತಿದ್ದು, ಅದನ್ನು ತಡೆಹಿಡಿಯಲು ಗ್ರಾಮಸ್ಧರು ತಹಸೀಲ್ದಾರ್‌ಗೆ ಮನವಿ ಮಾಡಿದ್ದಾರೆ.
ಅನಾದಿ ಕಾಲದಿಂದಲೂ ಬೋಡಿ ಬಂಡೆಯ ನೀರು ಕೆರೆಗೆ ಅಸರೆಯಾಗಿದ್ದು,  ಕೆಲವು ದಿನಗಳಿಂದ ಬಂಡೆಯ ಮೇಲೆ ಗಣಿಗಾರಿಕೆ ಪ್ರಾರಂಭವಾಗಿ ನೀರು ಜಾರುವ ಪ್ರದೇಶ ಸಮತಟ್ಚಾಗಿ ಕೆರೆಗೆ ನೀರು ಬರುವುದರಿಂದ ನೀರು ಜಾರುವ ಪ್ರದೇಶ ಸಮತಟ್ಟಾಗಿ ನೀರು ಬರುವುದು ಕಡಿಮೆಯಾಗಿದೆ.
ತಕ್ಷಣ ಗಣೆಗಾರಿಕೆ ನಿಲ್ಲಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಸಂಬಂಧ ಮನವಿ ಸ್ವೀಕರಿಸಿದ ತಹಸೀಲ್ದಾರ್ ಡಿ.ವಿ. ರಾಮಮೂರ್ತಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆಂದು ಗ್ರಾಮಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.