ಕೋಲಾರ

ಮಕ್ಕಳಲ್ಲಿ ಸ್ವಚ್ಛತೆ ಅರಿವು ಮೂಡಿಸಿ:ಚನ್ನಬಸವಣ್ಣ

Published On :

ಕನ್ನಡಪ್ರಭ ವಾರ್ತೆ ಕೋಲಾರ ಜೂ.27
ಉತ್ತಮ ಆರೋಗ್ಯಕ್ಕಾಗಿ ಮಕ್ಕಳಲ್ಲಿ ವೈಯಕ್ತಿಕ ಸ್ವಚ್ಛತೆಯ ಅರಿವು ಮೂಡಿಸಬೇಕು ಎಂದು ತಾಲೂಕು ಪಂಚಾಯಿತಿ ಅಧಿಕಾರಿ ಚನ್ನಬಸವಣ್ಣ ಕರೆ ನೀಡಿದರು.ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಶಾಲಾ ಸ್ವಚ್ಛತೆ ಹಾಗೂ ವೈಯಕ್ತಿಕ ಶುಭ್ರತೆಗಾಗಿ ನಿರ್ಮಲ ಭಾರತ ಅಭಿಯಾನ ಹಾಗೂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ಶುಭ್ರತೆ ಪ್ರೋತ್ಸಾಹಿಸಿ ಜಿ. ಶ್ರೀನಿವಾಸ್ ನೀಡಿದ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು.
ಮಕ್ಕಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಬೇಕು, ಇದು ಉತ್ತಮ ಪರಿಸರದೊಂದಿಗೆ ಮಕ್ಕಳಲ್ಲಿ ಸದಾ ಗೆಲುವು, ಆತ್ಮಸ್ಥೈರ್ಯ ತುಂಬುತ್ತದೆ ಎಂದರು.ಮಕ್ಕಳಲ್ಲಿ ಸ್ವಚ್ಛತೆ ಕಲಿಕೆಗೂ ಸ್ಫೂರ್ತಿ ತುಂಬುತ್ತದೆ, ಅವರನ್ನು ಸಮಾಜ ಪ್ರೀತಿಯಿಂದ ಕಾಣುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.ನಿರ್ಮಲ ಭಾರತ ಅಭಿಯಾನದ ಸಂಯೋಜಕ ಜಿ. ಶ್ರೀನಿವಾಸ್, ಸ್ವಚ್ಛತೆ ಉತ್ತಮ ಆರೋಗ್ಯದ ಲಕ್ಷಣ ಎಂದು ತಿಳಿಸಿ, ಬಯಲು ಮಲವಿಸರ್ಜನೆ ತ್ಯಜಿಸಿ, ಶೌಚಾಲಯ ಬಳಸಿ ಎಂದು ಕಿವಿಮಾತು ಹೇಳಿದರು.  ಶಾಲೆಗಳಲ್ಲಿ ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಿ, ನೀರಿನ ಸಮಸ್ಯೆ ಇದ್ದರೆ ಸ್ಥಳೀಯ ಗ್ರಾಮ ಪಂಚಾಯತಿಯ ಸಹಕಾರ ಪಡೆದು ನಿವಾರಿಸಿಕೊಳ್ಳಿ ಎಂದರು. ಮುಖ್ಯೋಪಾಧ್ಯಾಯ ಎಸ್. ಮಂಜುನಾಥ್, ಅರಾಭಿಕೊತ್ತನೂರು ಕ್ಲಸ್ಟರ್ ಸಿ.ಆರ್.ಪಿ ಚಂದ್ರಪ್ಪ, ಶಿಕ್ಷಕರಾದ ಸಾವಿತ್ರಿ, ವೆಸ್ಲಿ, ರೇಖಾ, ಭಾರತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.