ವಿದ್ಯೆ ಇದ್ದಲ್ಲಿ ಸೋಲಿನ ಭಯವಿಲ್ಲ: ಮಂಜುನಾಥಗೌಡ
ಮಾಲೂರು: ವಿದ್ಯೆ ಇದ್ದಲ್ಲಿ ಯಾವುದೇ ಕ್ಷೇತ್ರದಲ್ಲಿ ಸೋಲಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ವಿದ್ಯಾವಂತರಾಗಿ ತಮ್ಮ ಕುಟುಂಬ ಹಾಗೂ ದೇಶದ ಅರ್ಥಿಕತೆ ಹೆಚ್ಚಿಸಲು ಮುಂದಾಗಬೇಕು ಎಂದು ಶಾಸಕ ಕೆ.ಎಸ್.ಮಂಜುನಾಥ್ಗೌಡ ಕಿವಿಮಾತು ಹೇಳಿದರು.
ತಾಲೂಕಿನ ಚಿಕ್ಕತಿರುಪತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಥಳೀಯ ವೇಮನ ಚಾರಿಟಬಲ್ ಟ್ರಸ್ಟ್ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ಕೆ.ಎಸ್.ಮಂಜುನಾಥ್ಗೌಡ ಅವರು ಮಾತನಾಡಿದರು.ಬಯಲು ಪ್ರದೇಶದಲ್ಲಿ ನೀರಿನ ಕೊರತೆಗಳಿಂದ ಕೃಷಿ ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ರೈತನ ಮಕ್ಕಳು ವ್ಯಾಸಂಗದ ಕಡೆ ಹೆಚ್ಚು ಗಮನ ನೀಡಬೇಕು. ಇಂದಿನ ಯುಗದಲ್ಲಿ ವಿದ್ಯೆಗೆ ಇರುವ ಮಹತ್ವ ಬೇರೆ ಯಾವೂದಕ್ಕೂ ಇಲ್ಲ ಎಂದರು. ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ಗೌಡ, ಜೆಡಿಎಸ್ ಮುಖಂಡರಾದ ಪಿ.ಸಿ.ಮುನಿರಾಜು, ಸಿದ್ದರೆಡ್ಡಿ, ವೆಂಕಟೇಶ್, ಮಂಜುನಾಥ್, ಪ್ರೆಸ್ ರಾಜು, ಸಂಪಂಗಿ, ಲಕ್ಕೂರು ಸುರೇಶ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಸಕ ಮಂಜುನಾಥಗೌಡರಿಗೆ ಅಭಿನಂದನೆ
ಮಾಲೂರು: ತಾಲೂಕಿನ ಚಿಕ್ಕತಿರುಪತಿಯ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಾಲಯ ಸಮತಿ ವತಿಯಿಂದ ಶಾಸಕ ಕೆ.ಎಸ್.ಮಂಜುನಾಥ್ಗೌಡ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಮಂಜುನಾಥ್ಗೌಡ, ಇಂತಹ ಸನ್ಮಾನಗಳಿಂದ ಬೀಗದೆ, ಜವಾಬ್ದಾರಿ ಹೆಚ್ಚಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂಬುದನ್ನು ನೆನಪಿಸುತ್ತವೆ ಎಂದು ಭಾವಿಸುವೆ ಎಂದರು. ತಾಲೂಕಿನಲ್ಲಿ ಭ್ರಷ್ಟ ರಹಿತ ಆಡಳಿತ ನೀಡುವ ಮೂಲಕ, ಪ್ರತಿ ಗ್ರಾಮವನ್ನು ಸರ್ವತೋಮುಖ ಅಭಿವೃದ್ಧಿ ಪಡಿಸಿದ ನಂತರ ನನ್ನ ಸನ್ಮಾನಕ್ಕೆ ಬೆಲೆ ಸಿಗಲಿದೆ ಎಂದು ಭಾವಿಸಿದ್ದೇನೆ ಎಂದು ಶಾಸಕರು ನುಡಿದರು. ಜೆಡಿಎಸ್ ಮುಖಂಡರಾದ ಚಂದ್ರಶೇಖರ್ ಗೌಡ, ನಂಜೇಗೌಡ, ಲಕ್ಕೂರು ಸುರೇಶ್, ದೇವಾಲಯ ಸಮಿತಿಯ ಪುಟ್ಟಪ್ಪ, ಲಕ್ಕೂರು ಶ್ರೀನಿವಾಸ್, ಕಲ್ಕೆರೆ ಶ್ರೀನಿವಾಸ್ಗೌಡ ಸೇರಿದಂತೆ ಎಲ್ಲ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

