ಕೋಲಾರ

ಸರ್ಕಾರಿ ಅಭಿಯೋಜಕ ರಮೇಶ್‌ಗೆ ಬೀಳ್ಕೊಡುಗೆ

Published On :

ಚಿಕ್ಕಬಳ್ಳಾಪುರ: ಲೋಕಾಯುಕ್ತ ಅಭಿಯೋಜಕರಾಗಿ ವರ್ಗಾವಣೆಗೊಂಡಿರುವ ಸರ್ಕಾರಿ ಅಭಿಯೋಜಕ ಡಿ.ರಮೇಶ್ ಬಾಬುರವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ವಕೀಲರ ಸಂಘದ ವತಿಯಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈರಣ್ಣವರ್, ವರ್ಗಾವಣೆಗೊಂಡಿರುವ ಸರ್ಕಾರಿ ಅಭಿಯೋಜಕ ರಮೇಶ್ ಬಾಬು ಅವರನ್ನು ಸನ್ಮಾನಿಸಿದರು.
ನಂತರ ಮಾತನಾಡಿದ ಅವರು, ಸರ್ಕಾರಿ ನೌಕರರು ವರ್ಗಾವಣೆಯಾಗುತ್ತಿರುವಂಥದು ಸಾಮಾನ್ಯ ವಿಷಯ. ವರ್ಗಾವಣೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ಎಲ್ಲಿಯೇ ಆಗಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗುವುದು ಮುಖ್ಯ. ಪ್ರತಿಯೊಬ್ಬರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಒಳ್ಳೆಯ ಹೆಸರನ್ನು ಗಳಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ಹರಿಕುಮಾರ್, ತಮ್ಮೇಗೌಡ, ಕೆ.ಎಂ. ಗೋವಿಂದರೆಡ್ಡಿ, ರುದ್ರಮುನಿ, ಸುರೇಶ್ ಬಾಬು, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯಲ್ಲಿ ಪರಿಸರ ದಿನಾಚರಣೆ
ಕನ್ನಡಪ್ರಭ ವಾರ್ತೆ ಕೋಲಾರ ಜೂ.28

ಜಿಲ್ಲೆಯ ಮಾಲೂರು ತಾಲೂಕಿನ ತೊರ್ನಹಳ್ಳಿ ರಮಾಮಾಧವ  ಪ್ರೌಢಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.
ಜಿ.ಪಂ, ತಾಪಂ, ಜಲಾನಯನ ಇಲಾಖೆ, ಪ್ರೌಢಶಾಲೆಯ ಇಕೋ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜಲಾನಯನ ಅಧಿಕಾರಿ ವೆಂಕಟಾಚಲಪತಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತಮ ಆರೋಗ್ಯ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ ಪರಿಸರ ಕಲುಷಿತವಾಗದಂತೆ ಎಚ್ಚರವಹಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಗ್ರಾ.ಪಂ ಅಧ್ಯಕ್ಷ ಕೆ.ಮುನಿಶಾಮಪ್ಪ, ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಸುತ್ತಮುತ್ತಲ ಪರಿಸರಕ್ಕೆ ಧಕ್ಕೆಯಾಗದಂತೆ ಮನೆಗೊಂದು ಮರ, ಊರಿಗೊಂದು ವನ ಎಂಬಂತೆ ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸಬೇಕು, ಪೋಷಿಸಬೇಕು ಎಂದು ಕಿವಿಮಾತು ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸೌಜನ್ಯ-ಪ್ರಥಮ,  ತೇಜಸ್ವಿನಿ-ದ್ವಿತೀಯ,  ಟಿ.ಎಂ.ಮೇಘನಾ-ತೃತೀಯ ಬಹುಮನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಪಿಡಿಓ ಚೌಡರೆಡ್ಡಿ, ಮುಖ್ಯ ಶಿಕ್ಷಕ ಮುನಿರಾಜು, ಮಂಜುನಾಥ್, ಸೋಮಶೇಖರ್, ರವೀಂದ್ರನಾಥ್, ರವಣಪ್ಪ, ಬಿ.ಪಿ. ರಾಮಪ್ಪ, ಶ್ರೀಧರ್, ರೋಜಾರಾಮಪ್ಪ, ಜಿ.ಸಿ. ವೆಂಕಟಸ್ವಾಮಿ, ಪಿ.ಜಿ.ವಿದ್ಯಾಧರಿ, ಹೆಚ್. ಕೃಷ್ಣಮೂರ್ತಿ, ಆನಂದ್, ಶ್ರೀನಿವಾಸ್, ತಿಮ್ಮರಾಯಪ್ಪ, ರಾಜಶೇಖರ್, ಸವಿತಾ ಮತ್ತಿತರರು ಹಾಜರಿದ್ದರು. ಇಕೋ ಕ್ಲಬ್ ಸಂಚಾಲಕ ಟಿ. ಸುಬ್ಬರಾಮಯ್ಯ ನಿರೂಪಿಸಿ, ದಾಸ್ ಫೌಂಡೇಷನ್‌ನ ದೇವರಾಜ್ ಸ್ವಾಗತಿಸಿ, ಮಂಜುನಾಥ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.