ಕೋಲಾರ

ಕಲ್ಕೆರೆ ಮಾರಿಕಾಂಭ ದೇವಾಲಯ ಪುನರ್ ಪ್ರತಿಷ್ಠಾಪನೆ

Published On :

ಕ.ಪ್ರ.ವಾರ್ತೆ ,  ಮಾಲೂರು ,  ಜೂ. 29
ತಾಲೂಕಿನ ಕಲ್ಕೆರೆ ಗ್ರಾಮದಲ್ಲಿರುವ ಗ್ರಾಮ ದೇವತೆ ಮಾರಿಕಾಂಭ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಗ್ರಾಮದೇವತೆ ಮಾರಿಕಾಂಭ ದೇವಾಲಯವನ್ನು ಗ್ರಾಮಸ್ಥರೆಲ್ಲ ಸೇರಿ ಪುನರ್ ನಿರ್ಮಿಸಿದ್ದು, ಧಾರ್ಮಿಕ ಕೈಂಕರ್ಯಗಳು ಗುರುವಾರ ರಾತ್ರಿಯಿಂದಲೇ ಪ್ರಾರಂಭವಾಗಿದ್ದವು. ಪವನ ಹೋಮ, ಗಣಹೋಮ ಸೇರಿದಂತೆ ವಿವಿಧ ರೀತಿಯ ಹೋಮಗಳನ್ನು ನೆರವೇರಿಸಲಾಯಿತು. ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಮಾರಿಕಾಂಭ ವಿಗ್ರಹವನ್ನು ಬರಮಾಡಿಕೊಂಡರು. ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.