ವಸತಿ ಶಾಲೆಗೆ ಶಾಸಕಿ ರಾಮಕ್ಕ ಭೇಟಿ, ಪರಿಶೀಲನೆ
ಕ.ಪ್ರ.ವಾರ್ತೆ , ಕೆಜಿಎಫ್ , ಜೂ. 29
ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳು ಆಹಾರ ಸೇವಿಸಿ ಅಸ್ವಸ್ಥಗೊಂಡು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ ಶಾಸಕ ವೈ. ರಾಮಕ್ಕ ವಸತಿ ಶಾಲೆಯ ಭೋಜನಾಲಯಕ್ಕೆ ಭೇಟಿ ನೀಡಿ ಶಾಲಾ ಮಕ್ಕಳಿಗೆ ಮಾಡಿದ ಆಹಾರ ಹಾಗೂ ಗುಣಮಟ್ಟ ಪರಿಶೀಲಿಸಿದರು.
ಶುಕ್ರವಾರ ಬೆಳಗ್ಗೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೊಂಗಲ್ ತಿಂದ 15ಕ್ಕೂ ಹೆಚ್ಚು ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕಿ ವೈ. ರಾಮಕ್ಕ ಹಾಗೂ ಮಾಜಿ ಶಾಸಕ ವೈ.ಸಂಪಂಗಿ ಶನಿವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡುವ ಊಟ, ತಿಂಡಿಗಳು ಮತ್ತು ಆಹಾರ ಶುಚಿತ್ವ ಬಗ್ಗೆ ಪರಿಶೀಲಿಸಿದರು.
ಇದೇ ವೇಳೆ ಶಾಲೆಯ ಪ್ರಾಂಶುಪಾಲರಾದ ಶಶಿಕಲಾ ಅವರೊಂದಿಗೆ ಮಾತನಾಡಿದ ಶಾಸಕಿ, ಶಾಲಾ ಮಕ್ಕಳಿಗೆ ಸರಿಯಾದ ಊಟ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಹಾಗೂ ಹಲವಾರು ದೂರುಗಳು ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 260 ಮಕ್ಕಳಿರು ಶಾಲೆಯಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ತಿಳಿಸಿದರು.
ಈ ವೇಳೆ ನಗರಸಭಾ ಸದಸ್ಯರಾದ ಅಶೋಕ್, ವಿಜಯಕುಮಾರ್, ಮಾಜಿ ನಗರಸಭೆ ಸದಸ್ಯೆ ಸುಮಾನಾಗರಾಜ್, ಶಾಲೆಯ ಶಿಕ್ಷಕರು, ಅಡುಗೆ ಬಟ್ಟರು ವಿದ್ಯಾರ್ಥಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

