ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಗುಡಿಬಂಡೆ: ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ, ಸರ್ಕಾರವಾಗಲೀ, ಅಧಿಕಾರಿಗಳಾಗಲೀ ತಲೆಕೆಡಿಸಿಕೊಳ್ಳದೇ ಮೂಖರಂತೆ ವರ್ತಿಸುತ್ತಿರುವುದನ್ನು ಖಂಡಿಸಿ ಗುಡಿಬಂಡೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಪಟ್ಟಣದ ಮುಖ್ಯ ಬೀದಿಯಲ್ಲಿ ರಾಲಿ ಹೊರಟ ಪ್ರತಿಭಟನಾಕಾರರು ಮಾತನಾಡಿ ಗುಡಿಬಂಡೆ ತಾಲೂಕು ಆಂದ್ರಪ್ರದೇಶದ ಗಡಿಭಾಗದ ತೀರಾ ಹಿಂದುಳಿದ ಪ್ರದೇಶವಾಗಿದ್ದು ಇಲ್ಲಿ ಅತಿ ಮುಖ್ಯವಾಗಿ ನೀರಿನ ಸಮಸ್ಯೆ, ರಸ್ತೆ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪರಮಶೀವಯ್ಯ ವರದಿಯನ್ನು ಕೂಡಲೇ ಅನುಷ್ಠಾನಕ್ಕೆ ತರುವುದರ ಮೂಲಕ ಗಡಿ ಬಾಗದ ಈ ಪ್ರದೇಶ್ಕಕೆ ನೀರಿನ ಸಮಸ್ಯೆ ನಿವಾರಿಸಬೇಕು. ಅಲ್ಲದೇ ಇತ್ತೀಚೆಗೆ ತಾಲೂಕು ಆಡಳಿತ ಸಾವಿರಕ್ಕೂ ಮೇಲ್ಪಟ್ಟ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿ ನಿಜವಾದ ದಲಿತರಿಗೆ ಅನ್ಯಾಯವೆಸಗಿದೆ. ಇದರ ಬಗ್ಗೆ ವಿಚಾರಿಸಿದರೇ ಆಹಾರ ಇಲಾಖೆಯಾಗಲೀ, ತಹಸೀಲ್ದಾರರಾಗಲೀ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದರು.
ಆರು ತಿಂಗಳ ಹಿಂದೆ ದಲಿತರು ನೀಡಿರುವ ನಿವೇಶನಗಳನ ಅರ್ಜಿಗಳನ್ನು ಕೂಡಲೇ ಪರಿಶೀಲಿಸಿ ನಿವೇಶನಗಳನ್ನು ಒದಗಹಿಸಬೇಕು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊರ ಗುತ್ತಿಗೆಯಾದರದ ಮೇಲೆ ಕೆಲಸ ಮಾಡುವ ನೌಕರರನ್ನು ದಿನಗೂಲಿ ನೌಕರರಾಗಿ ಪರಿಗಣಿಸಬೇಕು, ದಲಿತರ ಸ್ಮಶಾನಕ್ಕೆ ಜಾಗ ಅನುಕೂಲ ಮಾಡಿಕೊಡಬೇಕು ಎಂಬ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟಿಸಿದರು.
ಈ ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕದಿರಪ್ಪ, ಗಂಗಯ್ಯ, ಗಂಗರಾಜು, ಮುನಿಕೃಷ್ಣ, ವೆಂಕಟೇಶ್, ಕರ್ನಾಟಕ ಮಹಿಳಾ ಒಕ್ಕೂಟ, ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

