ಕೋಲಾರ

'ವಿದ್ಯಾಭ್ಯಾಸದೆಡೆ ಹೆಚ್ಚು ಗಮನ ಅಗತ್ಯ'

Published On :

ಕೆಜಿಎಫ್: ಜೀವನದಲ್ಲಿ ಉನ್ನತ ಸ್ಥಾನಕ್ಕೆ ಹೋಗಲು ವಿದ್ಯಾಭ್ಯಾಸ ಅತಿ ಮುಖ್ಯ. ಆದ್ದರಿಂದ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಶಾಸಕಿ ವೈ.ರಾಮಕ್ಕ ಕೆಜಿಎಫ್‌ನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಶಾಲಾ ಅಭಿವೃದ್ಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅದೇ ರೀತಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ದೇಶದ ಅಭಿವೃದ್ಧಿಗೆ ಇಂದಿನ ವಿದ್ಯಾರ್ಥಿಗಳ ಗುಣಾತ್ಮಕ ವಿದ್ಯಾಭ್ಯಾಸ ಅತಿ ಮುಖ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಕಾಲೇಜಿನ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗೆ ತಾವು ಶಾಸಕರಾಗಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಸುಬ್ರಮಣಿ ಆಚಾರಿ ಮಾತನಾಡಿದರು. ಕಾಲೇಜಿನಲ್ಲಿ ಶೌಚಾಲಯ ಕಟ್ಟಡ ನಿರ್ಮಾಣ ಮತ್ತು ವಿರ್ದ್ಯಾರ್ಥಿಗಳಿಗೆ ಎರಡು ಕೊಠಡಿಗಳ ದುರಸ್ಥಿ ಮತ್ತು ಕಾಲೇಜಿಗೆ ಬರುವ ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಭಾಗದವರೇ ಆಗಿದ್ದಾರೆ. ಅವರಿಗೆ ಸರಿಯಾದ ಸಮಯಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳ ವ್ಯವಸ್ಥೆಗಳಿಲ್ಲದೆ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ವೈ.ರಾಮಕ್ಕ ಅವರಿಗೆ ಮನವಿ ಮಾಡಿದರು.  ಈ ವೇಳೆ ಮಾಜಿ ಶಾಸಕ ವೈ.ಸಂಪಂಗಿ ಅವರು ತಮ್ಮ ಬೆಂಬಲಿಗರ ಮತ್ತು ಮುಖಂಡರಲ್ಲಿ ಶಾಲೆಯ ಅಭಿವೃದ್ಧಿಗಾಗಿ ಹಣವನ್ನು ವಸೂಲಿ ಮಾಡಿ ಕಾಲೇಜಿನ ಪ್ರಾಂಶುಪಾಲರಿಗೆ ನೀಡಿದರು. ಈ ವೇಳೆ ಕಾಲೇಜಿನ ಉಪನ್ಯಾಸಕರಾದ ಜಿ.ಪ್ರಭಾಕರ್‌ರೆಡ್ಡಿ, ಅಶ್ವತ್‌ನಾರಾಯಣ, ವಿಜಯಕುಮಾರ್, ಅಶೋಕ್, ಸುಮಾ ನಾಗರಾಜ್, ಅಮರೇಂದ್ರಮೌನಿ, ಮುನಿಸ್ವಾಮಿರೆಡ್ಡಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.