ಪಕ್ಷ ಸಂಘಟಿಸಲು ಕಾರ್ಯಕರ್ತರ ಶ್ರಮ ಅಗತ್ಯ: ಸಂಸದ ಮೋಹನ್
ಚಿಕ್ಕಬಳ್ಳಾಪುರ: ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ಸಂಸದ ಪಿ.ಸಿ.ಮೋಹನ್ ಕರೆ ನೀಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಹಗರಣಗಳಿಂದ ಬೇಸತ್ತ ಜನರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅಲೆ ಎದ್ದಿದ್ದು ಅವರ ಕೈ ಬಲಪಡಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಸಲಹೆ ನೀಡಿದರು.
ಜಿಲ್ಲೆಯ ಮಂಡಲಗಳಿಗೆ ತಾಲೂಕುವಾರು ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿದ್ದು ಚಿಂತಾಮಣಿ ಮತ್ತು ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಮಾತ್ರ ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲಗಳಾಗಿ ವಿಂಗಡಿಸಲಾಗಿದೆ.
ನಗರ ಮಂಡಲದ ಅಧ್ಯಕ್ಷರಾಗಿ ಸುಬ್ಬರಾಜು, ಪ್ರಧಾನ ಕಾರ್ಯದರ್ಶಿಗಳಾಗಿ ನಾಗಭೂಷಣ್, ವರದರಾಜು, ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ಅವುಲಗುರ್ಕಿಯ ಶ್ರೀನಿವಾಸರೆಡ್ಡಿ,ಪ್ರಧಾನ ಕಾರ್ಯದರ್ಶಿಗಳಾಗಿ ಕಿಶೋರ್ ಮತ್ತು ಲೋಕೇಶ್ ಆಯ್ಕೆಯಾಗಿದ್ದಾರೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ ಇತರರು ಇದ್ದರು.
ಕರವೇ ಸಂಘಟನೆಗೆ ಶ್ರಮಿಸಲು ಸಲಹೆ
ಕೆಜಿಎಫ್: ಇಲ್ಲಿನ ಕನ್ನಡ ಸಂಘದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕರವೇ ನೂತನ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಸನ್ಮಾನ ಸ್ವೀಕರಿಸಿ ಮಾತನಾಡಿ, ಕೆಜಿಎಫ್ ಕ್ಷೇತ್ರದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಅಭಿವೃದ್ಧಿ ಮತ್ತು ಸಂಘಟನೆ ಬೆಳವಣಿಗೆಗೆ ಕಾರ್ಯಕರ್ತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚಿಸಿ ವಾರದೊಳಗೆ ಪದಾಧಿಕಾರಿಗಳ ಆಯ್ಕೆಯ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಗೌರವಾಧ್ಯಕ್ಷ ಎಸ್.ಮದರಪ್ಪ, ಜಿಲ್ಲಾ ಮಹಿಳಾ ಅಧ್ಯಕ್ಷೆ ಚಿತ್ರಾ ರಮೇಶ್, ತಾಲೂಕು ಅಧ್ಯಕ್ಷ ಎಸ್.ನಂಜುಂಡಪ್ಪ, ನಗರ ಮಹಿಳಾ ಅಧ್ಯಕ್ಷೆ ಪಲ್ಲವಿ, ತಿಮ್ಮರಾಜು ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

