ಕೋಲಾರ

ಬಡವರಿಗೆ ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಬಾಗೇಪಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ದಲಿತ ಸಂಘರ್ಷ ಸಮಿತಿ ಮೆರವಣಿಗೆ
ಬಾಗೇಪಲ್ಲಿ: ಬಡವರಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಪಟ್ಟಣದ ಡಾ. ಎಚ್.ಎನ್.ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಮಿತಿಯ ಮುಖಂಡರಾದ ಎಂ.ಜಯಣ್ಣ, ನಿವೇಶನ ರಹಿತರಿಗೆ ನಿವೇಶನ ಹಾಗೂ ದಲಿತರ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಸಮಾರು 40 ವರ್ಷಗಳಿಂದಲೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಹೋರಾಟ ನಡೆಸುತ್ತಿದ್ದರೂ ಇದುವರೆಗೂ ಬೇಡಿಕೆಗಳನ್ನು ಈಡೇರಿಸುವ ಗೋಜಿಗೆ ಹೋಗಿಲ್ಲವೆಂದು ಆರೋಪಿಸಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 65 ವರ್ಷಗಳು ಕಳೆದರೂ ಸ್ಮಶಾನಕ್ಕೆ ಜಾಗವನ್ನು ನೀಡಿ ಎಂದು ಕೇಳಿಕೊಳ್ಳುವಂತಹ ಪರಿಸ್ಥಿತಿ ಇದೆ ಎಂದು ವಿಷಾದ ವ್ಯಕ್ತಪಡಿಸಿದರು.
ಸಮಿತಿಯ ಸಂಚಾಲಕ ಬಿ.ಎನ್.ಗಂಗಾಧರ್ ಮಾತನಾಡಿ, ದಲಿತರ ಆತ್ಮಗೌರವ, ಅಭಿವೃದ್ಧಿ, ಸ್ವಾತಂತ್ರ್ಯ, ಶಿಕ್ಷಣ ಎಂಬುವುಗಳು ಪರಲೋಕದ ವಿಚಾರಗಳೆಂಬಂತೆ ತಾಲೂಕು ಹಾಗೂ ಜಿಲ್ಲಾ ಯಂತ್ರಗಳು ದಲಿತ ವಿರೋಧಿಗಳ ರೀತಿಯಲ್ಲಿ ವರ್ತಿಸುತ್ತಿರುವುದು ನಾಚಿಕೆಗೇಡಿನ ವಿಷಯ. ಇಂದಿನ ರಾಜಕೀಯ ಪಕ್ಷಗಳು ದಲಿತರನ್ನು ತಮ್ಮ ಜನಸಂಖ್ಯೆ ಬಲ ಪ್ರದರ್ಶನಕ್ಕೆ ಮಾತ್ರ ಉಪಯೋಗಿಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕದಸಂಸ ಜಿಲ್ಲಾ ಸಮಿತಿ ಪದಾಧಿಕಾರಿ ಕಡ್ಡಿಲು ವೆಂಕಟರವಣಪ್ಪ, ಲಕ್ಷ್ಮೀನರಸಿಂಹಪ್ಪ, ತಾಲೂಕು ಸಮಿತಿ ಪದಾಧಿಕಾರಿಗಳಾದ ಜಿ.ಎಲ್.ರಾಮಾಂಜನೇಯಪ್ಪ, ಎಂ.ಜಿ.ಕಿರಣ್‌ಕುಮಾರ್, ಡಿ.ವಿ.ವೆಂಕಟರವಣ, ನಂದೀಶ, ಶ್ರೀನಿವಾಸ್, ವೆಂಕಟರವಣಪ್ಪ, ದಲಿತ ವಿದ್ಯಾರ್ಥಿ ಮುಖಂಡರಾದ ಮಹೇಶ್, ಆದಿ, ಡಿ.ವಿ.ಮಂಜುನಾಥ್, ರಮೇಶ್, ಎಂ.ಎನ್.ಶ್ರೀನಿವಾಸ್, ಸಂತೋಷ್, ನವೀನ್ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.