ಕೋಲಾರ

ಮಹೇಶ್‌ಗೆ ಮುಖ್ಯಮಂತ್ರಿ ಪದಕ: ಶಾಶ್ವತ ನೀರಾವರಿ ಹೋರಾಟ ಸಮಿತಿಯ ಸನ್ಮಾನ

Published On :

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿಯ ಪದಾಧಿಕಾರಿಗಳು, ಉತ್ತಮ ಕಾರ್ಯ ನಿರ್ವಹಣೆಗೆ ಮುಖ್ಯಮಂತ್ರಿ ಪದಕವನ್ನು ಪಡೆದ ಚಿಕ್ಕಬಳ್ಳಾಪುರ ಆರಕ್ಷಕ ವೃತ್ತ ನಿರೀಕ್ಷಕ ಎಸ್.ಮಹೇಶ್‌ಕುಮಾರ್ ಅವರನ್ನು ಅಭಿನಂದಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸರಳ ಸನ್ಮಾನ ಸಮಾರಂಭದಲ್ಲಿ ಶಾಲು ಹೊದಿಸಿ ಗೌರವಿಸಿದ ಮುಖಂಡರು  ಮಹೇಶ್‌ಕುಮಾರ್‌ರವರ ಕೆಲಸ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಿತಿಯ ಜಿಲ್ಲಾ ಸಂಚಾಲಕ ಆರ್.ಆಂಜನೇಯರೆಡ್ಡಿ ಮಾತನಾಡಿ, ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅನೇಕ ಅಧಿಕಾರಿಗಳು ನಮ್ಮ ಮುಂದೆ ಇದ್ದಾರೆ. ಇವರ ನಡುವೆಯೂ ಅನೇಕರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಅಧಿಕಾರಿಗಳು ಎಂಬ ಹೆಸರನ್ನು ಪಡೆದಿದ್ದಾರೆ. ಇವರಲ್ಲಿ ಮಹೇಶ್‌ಕುಮಾರ್ ಸಹ ಒಬ್ಬರು ಎಂದರು.
ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ ಮಾತನಾಡಿ, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳನ್ನು ಅವಧಿಗೆ ಮುನ್ನವೇ ವರ್ಗಾವಣೆ ಮಾಡುವ ಪರಿಪಾಠವನ್ನು ಸರ್ಕಾರ ರೂಢಿಸಿಕೊಂಡಿದೆ. ಇದೊಂದು ದೌರ್ಭಾಗ್ಯವೇ ಸರಿ. ಕರ್ತವ್ಯ ನಿಷ್ಠೆ ಮೆರೆಯುವ, ಉತ್ತಮವಾಗಿ ಕಾರ್ಯ ನಿರ್ವಹಿಸುವ ಅಧಿಕಾರಿಗಳನ್ನು ಪದೇ ಪದೆ ವರ್ಗಾವಣೆ ಮಾಡುವಂತಹುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಮಹೇಶ್‌ಕುಮಾರ್, ತಮ್ಮ ಮೇಲೆ ಜನರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮುಖಂಡರಾದ ಕೆ.ಸಿ.ರಾಜಾಕಾಂತ್, ಮಳ್ಳೂರು ಹರೀಶ್, ಭಕ್ತರಹಳ್ಳಿ ಬೈರೇಗೌಡ, ಸಿ.ಎನ್.ಸುಷ್ಮಾ ಶ್ರೀನಿವಾಸ್, ವಿ.ಆನಂದ್, ವೆಂಕಟರೋಣಪ್ಪ, ನಾರಾಯಣಸ್ವಾಮಿ, ಅಂತಾರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.