ಕೋಲಾರ

'ಮತದಾರರು ಬಿಜೆಪಿ ಅಭಿವೃದ್ಧಿ ಕಾರ್ಯ ಮರೆತಿಲ್ಲ'

Published On :

ಚಿಂತಾಮಣಿ:  ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಜನಸಾಮಾನ್ಯರು ಇಂದಿಗೂ ಸಹ ಮರೆತಿಲ್ಲ ಎಂದು ಮಾಜಿ ಸಚಿವ, ರಾಜ್ಯ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ರಾಮಚಂದ್ರಗೌಡ ಹೇಳಿದರು.
ನಗರದ ಪಾಲಿಟೆಕ್ನಿಕ್ ರಸ್ತೆಯ ತಾಲೂಕು ಬಿಜೆಪಿ ಕಾರ್ಯಾಲಯದಲ್ಲಿ ಮಾ.7ರಂದು ನಡೆಯಲಿರುವ ಚಿಂತಾಮಣಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿರುವವರ ಪರವಾಗಿ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದ ವೇಳೆ ಅವರು ಮಾತನಾಡಿದರು.
ಬಿಜೆಪಿ ಸರ್ಕಾರವು ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಿರುವುದರಿಂದ ಜನರು ಇಂದಿಗೂ ಸಹ ಬಿಜೆಪಿ ಸರ್ಕಾರವನ್ನು ಮತ್ತೆ ಬಯಸುತ್ತಿದ್ದಾರೆ. ಬಿಜೆಪಿಯಲ್ಲಿ ಸ್ಥಳೀಯ ನಗರಸಭಾ ಚುನಾವಣೆಯ 31 ವಾರ್ಡ್‌ಳಲ್ಲಿಯೂ ದಲಿತ, ಅಲ್ಪ ಸಂಖ್ಯಾತ, ಹಿಂದುಳಿದ ವರ್ಗಗಳ ಜನರಿಗೂ ಸಮಾನತೆಯಲ್ಲಿ ಸ್ಥಾನಗಳನ್ನು ಹಂಚಿ 'ಬಿ' ಫಾರಂ ನೀಡಿರುವ ಕ್ರಮವನ್ನು ಸ್ವಾಗತಿಸಿದರು.
ನಂತರ ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಸತ್ಯನಾರಾಯಣ ಮಹೇಶ್ ಮಾತನಾಡಿ, ಬಿಜೆಪಿ 5 ವರ್ಷಗಳ ಆಡಳಿತದಲ್ಲಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದೆ. ಆದರೆ, ಕ್ಷೇತ್ರದಲ್ಲಿ ರಸ್ತೆ, ಚರಂಡಿ, ಬೀದಿ ದೀಪಗಳು ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ಸರ್ಕಾರದಿಂದ ನೀಡಿರುವ ಅನುದಾನವಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಹೆಸರು ಹೇಳದೆ ಎಲ್ಲಾ ಕೆಲಸಗಳನ್ನು ನಾನು ಮಾಡಿರುವುದು ಎನ್ನುವುದು ಸರಿಯಲ್ಲ. ಈ ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಖಾತೆ ತೆರೆಯುವುದು ಖಚಿತ ಎಂದು ನುಡಿದರು.
ಈ ಸಂದರ್ಭ ತಾಲೂಕು ಬಿಜೆಪಿ ಅಧ್ಯಕ್ಷ ನಾ.ಶಂಕರ್, ಜಿಲ್ಲಾ ಉಪಾಧ್ಯಕ್ಷ ಬತ್ತಲಹಳ್ಳಿ ಶ್ರೀನಿವಾಸ್, ಮುಖಂಡರಾದ ಶಿವಣ್ಣ, ನಾಗರಾಜ್, ಗೋವಿಂದ್, ಮಂಜುನಾಥಾಚಾರಿ, ಮೋಹನ್, ವೆಂಕಟರಮಣ, ವೆಂಕಟೇಶ್ ಹಲವು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.