ಕೋಲಾರ

ಬಿಜೆಪಿ ಬೆಂಬಲಿಸಲು ಅಪ್ಪಾಜಿಗೌಡ ಮನವಿ

Published On :

ಪಿರಿಯಾಪಟ್ಟಣ: ಬಿಜೆಪಿ ಸರ್ಕಾರದ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳೇ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಅಧಿಕಾರ ಹಿಡಿಯಲು ಶ್ರೀರಕ್ಷೆಯಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಿ.ಜಿ. ಅಪ್ಪಾಜಿಗೌಡ ಹೇಳಿದರು.
ಪಟ್ಟಣದ 7ನೇ ವಾರ್ಡಿನ ಪಕ್ಷದ ಅಭ್ಯರ್ಥಿ ರಮೇಶ್ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಪಪಂನಲ್ಲಿ ಇದುವರೆಗೆ ಆಡಳಿತ ನಡೆಸಿದ ಪಕ್ಷಗಳು ಪಟ್ಟಣವನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದಿಂದ ಬಂದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪಪಂಗೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸುವುದರಿಂದ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮುಖಂಡರಾದ ಸಣ್ಣಮೊಗೇಗೌಡ, ಲೋಕಪಾಲಯ್ಯ, ಸೋಹನ್, ಶಿವಸ್ವಾಮಿ, ಜಹೂರ್ ಅಲಿ, ಪುಟ್ಟಸ್ವಾಮಿ, ರಾಜೇಗೌಡ, ನಂಜುಂಡಸ್ವಾಮಿ, ಸೋಮಶೇಖರ್ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.