ಕೋಲಾರ

ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ ಸರ್ಕಾರ: ಮೊಯ್ಲಿ

Published On :

ಗೌರಿಬಿದನೂರು: ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಯಾವುದೇ ರೀತಿಯ ಅಭಿವೃದ್ಧಿ ಕೆಲಸ ಮಾಡದೆ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ಕಾಲಹರಣ ಮಾಡುತ್ತಿದೆ ಎಂದು ಕೇಂದ್ರ ಇಂಧನ ಸಚಿವ ಡಾ.ಎಂ.ವೀರಪ್ಪ ಮೊಯ್ಲಿ ಕಿಡಿಕಾರಿದರು.
ಪುರಸಭೆ ಚುನಾವಣೆ ಅಂಗವಾಗಿ ಪಟ್ಟಣದಲ್ಲಿ ಅಭ್ಯರ್ಥಿಗಳೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಸಾಮೂಹಿಕ ಮತಯಾಚನೆ ಮಾಡುವ ವೇಳೆ ಮಾತನಾಡಿದ ಅವರು, ಬಿಜೆಪಿ ಒಡೆದು 3 ಭಾಗವಾಗಿದ್ದು, ಬಿಎಸ್‌ವೈ, ಜಗದೀಶ್ ಶೆಟ್ಟರ್, ಶ್ರೀರಾಮುಲು ಆ ಪಕ್ಷದ ಒಡಕಿನ ಸಾರಥಿಗಳಾಗಿದ್ದಾರೆ ಎಂದು ಲೇವಡಿ ಮಾಡಿದರು.
ಪಟ್ಟಣದ ಅಭಿವೃದ್ಧಿಗೆ ಕೇಂದ್ರ ಸರ್ಕಾರಗಳು ಹೆಚ್ಚಿನ ಅನುದಾನ ನೀಡುತ್ತಿದೆ. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಸರ್ಕಾರ ಹಂತ ಹಂತವಾಗಿ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದ್ದು, ರೈತರು, ದಲಿತರು ಮತ್ತು ಕಾರ್ಮಿಕರನ್ನು ತೀವ್ರವಾಗಿ ಕಡೆಗಣಿಸಲಾಗಿದೆ. ಈ ಬಾರಿ ಕಾಂಗ್ರೆಸ್‌ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ ಎಂದು ತಿಳಿಸಿದರು. ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಬಾಗೇಪಲ್ಲಿ ಶಾಸಕ ಸಂಪಂಗಿ, ಜಿ.ಪಂ. ಸದಸ್ಯರಾದ ರಾಘವೇಂದ್ರ ಹನುಮಾನ್, ಕೇಶವರೆಡ್ಡಿ, ತಾಪಂ ಅಧ್ಯಕ್ಷ ಎನ್.ನಿರಂಜನ್, ಉಪಾಧ್ಯಕ್ಷೆ ಜಲಜ, ಮಾಜಿ ಅಧ್ಯಕ್ಷ ಎಚ್.ಎನ್.ಪ್ರಕಾಶರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಕೆ.ಸತೀಶ್, ಎಸ್.ಎ.ಅಶ್ವತ್ಥನಾರಾಯಣರೆಡ್ಡಿ, ಬಿ.ಆರ್.ಶ್ರೀನಿವಾಸಮೂರ್ತಿ, ಎನ್.ಆರ್.ರಾಧಾಕೃಷ್ಣ, ಕಮಾಲಕರ್, ಬೊಮ್ಮಣ್ಣ, ವೆಂಕಟರಮಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.