ಕೋಲಾರ

ನಗರಸಭೆ ಅಧ್ಯಕ್ಷಗಿರಿಗೆ ಜೆಡಿಎಸ್‌ನಲ್ಲಿ ಪೈಪೋಟಿ

Published On :

ಕ.ಪ್ರ ವಾರ್ತೆ ್ಣ ಕೋಲಾರ ್ಣ ಮಾ.21
ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ 17 ಸ್ಥಾನ ಗಳಿಸಿರುವುದಲ್ಲದೆ ತಾನು ಬೆಂಬಲ ನೀಡಿ ಗೆಲ್ಲಿಸಿರುವ ಸಿಪಿಐಎಂ ಅಭ್ಯರ್ಥಿಯೊಬ್ಬರು ಗೆದ್ದಿರುವುದರಿಂದ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ವೇದಿಕೆ ಸಜ್ಜುಗೊಳಿಸುತ್ತಿದೆ.
ಆದರೆ. ಸರ್ಕಾರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವ ಮುನ್ನವೇ ಜೆಡಿಎಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಕಾಣಿಸಿಕೊಂಡಿದೆ.
ನಗರಸಭೆ ಮಾಜಿ ಅಧ್ಯಕ್ಷ ಅಪ್ರೋಜ್ ಪಾಷ ಅವರು ತಾವು ಹಿರಿಯ ಸದಸ್ಯರಾಗಿರುವುದರಿಂದ ತಮಗೆ ಅಧ್ಯಕ್ಷ ಸ್ಥಾನ ಕಲ್ಪಿಸಬೇಕೆಂದು ಪಕ್ಷದ ಜಿಲ್ಲಾ ಮುಖಂಡರನ್ನು ಒತ್ತಾಯಿಸಿದ್ದಾರೆ.
ಸಚಿವ ವರ್ತೂರ್ ಪ್ರಕಾಶ್ ಬಣದಿಂದ ಜೆಡಿಎಸ್‌ಗೆ ಬಂದು ಪಕ್ಷಕ್ಕೆ ಅಲ್ಪಸಂಖ್ಯಾತರ ಬೆಂಬಲ ಸಿಗುವುದಕ್ಕೆ ಶ್ರಮಿಸಿರುವುದರಿಂದ ಅಧ್ಯಕ್ಷ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಪಕ್ಷದ ಮತ್ತೊಬ್ಬ ಹಿರಿಯ ಕಾರ್ಯಕರ್ತ ಮುಬಾರಕ್ ಅವರು ಅಧ್ಯಕ್ಷ ಪದವಿ ಮೇಲೆ ಕಣ್ಣಿದ್ದಾರೆ. ಈಗಾಗಲೇ ಜೆಡಿಎಸಸ್ನಿಂದ ಗೆದ್ದಿರುವ ಅನೇಕ ಸದಸ್ಯರನ್ನು ಭೇಟಿಯಾಗಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಒಂದು ವೇಳೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾದಲ್ಲಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ 12ನೇ ವಾರ್ಡಿನ ರವೀಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ಜೆಡಿಎಸ್‌ನ ಅನೇಕರು ಮುಖಂಡರ ಮೇಲೆ ಒತ್ತಡ ತರುತ್ತಿದ್ದಾರೆ. ಮಾಜಿ ಉಪಾಧ್ಯಕ್ಷ ಮುರಳಿಗೌಡ, ಸುಕುಮಾರ್ ಸೇರಿದಂತೆ ಇನ್ನಿತರರುಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಜೆಡಿಎಸ್ ಬೆಂಬಲದಿಂದ ಗೆದ್ದಿರುವ ಸಿಪಿಐಎಂನ ಗಾಂಧಿನಗರ ನಾರಾಯಣಸ್ವಾಮಿ ಅವರು ಸಹ ತಮ್ಮ ಅಪ್ತರು ಹಾಗೂ ಜೆಡಿಎಸ್‌ನಲ್ಲಿರುವ ಮಿತ್ರರ ಮೂಲಕ ಅಧ್ಯಕ್ಷಗಿರಿಗೆ ಲಾಬಿ ಮಾಡುತ್ತಿದ್ದಾರೆ. ನಗರಸಭೆಯಲ್ಲಿ ಉತ್ತಮ ಆಡಳಿತಕ್ಕಾಗಿ, ಜನತೆಗೆ ಮೂಲ ಸೌಕರ್ಯ ಕಲ್ಪಿಸಲು ದಲಿತ ವರ್ಗಕ್ಕೆ ಸೇರಿದ ತಮ್ಮನ್ನು ಪರಿಗಣಿಸಿದಲ್ಲಿ ಜೆಡಿಎಸ್‌ಗೆ ಇನ್ನಷ್ಟು ಶಕ್ತಿ ಬರುತ್ತದೆ ಎಂದು ಅವರು ತಮ್ಮ ಮನದಾಳದ ಇಂಗಿತ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.