ಕೋಲಾರ

ಮತಗಟ್ಟೆ ಕಾರ್ಯ ಮುಕ್ತಾಯ

Published On :

ಮುಳಬಾಗಲು: ತಾಲೂಕಿನ 269 ಮತಗಟ್ಚಿ ಕೇಂದ್ರಗಳಿದ್ದು, ಮತಗಟ್ಚಿಗಳಿಗೆ ನೂತನ ನಂಬರ್ ಕೊಡುವ ಕೆಲಸ ಪೂರ್ಣವಾಗಿದೆ ಎಂದು ತಹಸೀಲ್ದಾರ್ ಡಿ.ವಿ.ರಾಮಮೂರ್ತಿ ತಿಳಿಸಿದ್ದಾರೆ. ಈ ಬಾರಿ ಚುನಾವಣಾ ಆಯೋಗದ ಸೂಚನೆಯಂತೆ ಮತಗಟ್ಟೆ ನಂಬರ್ ದಾಖಲು ಮಾಡಿದ ನಂತರ ಮೊಬೈಲ್ ಮೂಲಕ ಚುನಾವಣಾ ಆಯೋಗಕ್ಕೆ ಮತಗಟ್ಟೆಯ ವಿವರ ದಾಖಲಾಗುವುದು ಎಂದು ನುಡಿದರು.
25ಕ್ಕೆ ಕೆಡಿಪಿ ಸಭೆ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾ.25 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಆರ್. ನರಸಿಂಹಮೂರ್ತಿರವರ ಅಧ್ಯಕ್ಷತೆಯಲ್ಲಿ ಮಾಸಿಕ ಕೆ.ಡಿ.ಪಿ. ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎಸ್. ಶೇಖರಪ್ಪ ತಿಳಿಸಿದ್ದಾರೆ.
ಅಹವಾಲು ಸ್ವೀಕಾರ
ಚಿಕ್ಕಬಳ್ಳಾಪುರ: ಲೋಕಾಯುಕ್ತ ಪೊಲೀಸರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಮಾ. 22 ರಂದು ಬಾಗೇಪಲ್ಲಿ ತಾಲೂಕಿನ ಪುರಸಭೆ ಸಭಾಂಗಣ, ಮಾ.23 ರಂದು ಗುಡಿಬಂಡೆ ತಾಲೂಕಿನ ತಾಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಹಾಗೂ ಮಾ. 25 ರಂದು ತಾಲೂಕು ಪಂಚಾಯ್ತಿ ಸಾಮರ್ಥ್ಯಸೌಧದಲ್ಲಿ ಲೋಕಾಯುಕ್ತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಅಹವಾಲುಗಳನ್ನು ನೀಡಬಹುದು ಎಂದು ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಎಲ್. ಕೃಷ್ಣ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ
ಚಿಕ್ಕಬಳ್ಳಾಪುರ: ನಗರ ಉಪ-ವಿದ್ಯುತ್ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮದ ವತಿಯಿಂದ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ 66ಣ11 ಕೆವಿ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಚಿಕ್ಕಬಳ್ಳಾಪುರ ನಗರ, ಹೊಸಹುಡ್ಯ, ಮಂಚನಬಲೆ, ಗಿಡ್ಡನಹಳ್ಳಿ, ಜಾತವಾರ, ನಾಯನಹಳ್ಳಿ, ಪಟ್ರೇನಹಳ್ಳಿ, ತಿಪ್ಪೇನಹಳ್ಳಿ, ಹೊನೇಗಲ್, ಅಜ್ಜವಾರ, ಅಣಕನೂರು, ಅಡವಿಗೊಲ್ಲವಾರಹಳ್ಳಿ, ತಾಂಡ್ರಮರದಹಳ್ಳಿ, ಕಳವಾರ, ಹಾರೋಬಂಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಮಾ.22ರಂದು ಬೆಳಗ್ಗೆ 9 ರಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.