ಮುಳಬಾಗಲಲ್ಲೂ ವಿರೋಧ
ಮುಳಬಾಗಲು: ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿರುವ 13 ಖಾಸಗಿ ವಿಶ್ವವಿದ್ಯಾನಿಲಯ ಪ್ರಾರಂಭಿಸಲು ನೀಡಿರುವ ಮಸೂದೆಯನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿ ಮುಳಬಾಗಲು ಪಟ್ಟಣದಲ್ಲಿ ಗುರುವಾರ ಎಸ್ಎಫ್ಐ ಕಾರ್ಯಕರ್ತರುಗಳು ಪ್ರತಿಭಟನಾ ಮೆರವಣೆಗೆ ನಡೆಸಿ ನಂತರ ತಾಲೂಕು ಕಚೇರಿಯ ಬಳಿ ಧರಣೆ ನಡೆಸಿ ತಹಸೀಲ್ದಾರ್ ಡಿ.ವಿ.ರಾಮಮೂರ್ತಿಅವರಿಗೆ ಮನವಿ ಸಲ್ಲಿಸಿದರು.
ಸಂವಿಧಾನದ ಪ್ರಕಾರ ಸರ್ವರಿಗೂ ಸಮನವಾದ ಶಿಕ್ಷಣ ಎಂಬುದು ಆಶಯವಾಗಿದೆ. ಆದರೆ, ಖಾಸಗಿ ವಿಶ್ವವಿದ್ಯಾನಿಲಯಗಳಿಂದ ಹಣ ಇರುವವರಿಗೆ ಮಾತ್ರ ಉನ್ನತ ಶಿಕ್ಷಣ ದೊರೆಯುತ್ತದೆ. ಇದರಿಂದಾಗಿ ಬಡವರು. ಹಿಂದುಳಿದವರು, ಅಲ್ಪಸಂಖ್ಯಾತರು ವಿದ್ಯೆಯಿಂದ ವಂಚಿತರಾಗುತ್ತಾರೆ ಎಂದು ಎಸ್ಎಫ್ಐ ಮುಖಂಡರು ದೂರಿದರು ವಿಧೇಯಕಕ್ಕೆ ಸಹಿ ಹಾಕದಿರಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಎಸ್ಎಫ್ಐ ಮುಖಂಡರಾದ ಅಮರೇಶ್, ಜಿ.ಕುಮಾರ್, ಸುನೀಲ್. ಮಂಜುನಾಥ್, ಅಮರಾವತಿ. ಮೀನಾ, ಗಂಗಾಧರ. ವಿನೋದ್ ಕುಮಾರ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

