ಕೋಲಾರ

'ರಕ್ತದಾನದ ಅರಿವು ಮೂಡಿಸಿ'

Published On :

ಕ.ಪ್ರ ವಾರ್ತೆ ್ಣ ಚಿಕ್ಕಬಳ್ಳಾಪುರ ್ಣ ಮಾ.21ನಗರದ ಹೊರ ವಲಯದಲ್ಲಿರುವ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು.
ಎಸ್‌ಜೆಸಿಐಟಿ ಕಾಲೇಜಿನ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ಮತ್ತು ಎಸ್‌ಜೆಸಿಐಟಿ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಶಿಬಿರವನ್ನು ಸಿದ್ದೇಶ್ವರನಾಥ ಸ್ವಾಮೀಜಿ ಉದ್ಘಾಟಿಸಿದರು.
ರಕ್ತದಾನ ಮಹಾದಾನವಾಗಿದೆ. ಅದೆಷ್ಟು ಮಂದಿ ತುತು  ಚಿಕಿತ್ಸೆ ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಸಾವನ್ನಪ್ಪುತ್ತಾರೆ. ಅನೇಕರು ಸರಿಯಾದ ಸಮಯಕ್ಕೆ ರಕ್ತ ಸಿಗದೆ ಪರದಾಡಿ ನಾನಾ ರೀತಿಯಲ್ಲಿ ತೊಂದರೆಯನ್ನು ಅನುಭವಿಸುತ್ತಾರೆ. ರಕ್ತದ ಮಹತ್ವ ಏನು ಎನ್ನುವುದು ಆಗ ತಿಳಿಯುತ್ತದೆ ಎಂದ ಅವರು, ಸ್ವಯಂ ಪ್ರೇರಣೆಯಿಂದ ಹೆಚ್ಚಿಗೆ ಜನರು ರಕ್ತದಾನ ಮಾಡುವುದರಿಂದ ಹಲವರ ಪ್ರಾಣಗಳನ್ನು ಸಕಾಲಕ್ಕೆ ಉಳಿಸಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ರಕ್ತದಾನ ಮಾಡಬೇಕು. ಇಂತಹ ಕೆಲಸವನ್ನು ಮಾಡಿದಾಗ ಪುಣ್ಯ ಬರುತ್ತದೆ ಎಂದರು.
ಎಸ್‌ಜೆಸಿಐಟಿ ಕಾಲೇಜಿನ ಆಡಳಿತ ಸಂಸ್ಥೆಯ ಸದಸ್ಯ ಡಾ. ಕೆ.ಪಿ.ಶ್ರೀನಿವಾಸ ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ರೆಡ್‌ಕ್ರಾಸ್ ಸಹಯೋಗದೊಂದಿಗೆ ಬ್ಲಡ್ ಬ್ಯಾಂಕ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿಗೆ ರಕ್ತದಾನ ಶಿಬಿರ ಕಾರ್ಯಕ್ರಮಗಳನ್ನು ಕೈಗೊಂಡು ರಕ್ತದ ಕೊರತೆಯನ್ನು ನೀಗಿಸಲು ಶ್ರಮಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಈ ಹಿಂದೆ ಜಿಲ್ಲೆಯಲ್ಲಿ ಜನರು ರಕ್ತದ ಕೊರತೆಯಿಂದ ತುಂಬಾ ಅನುಭವಿಸುತ್ತಿದ್ದ ತೊಂದರೆ ಈಗ ಕಡಿಮೆಯಾಗಿದೆ ಎಂದರು.
ಇಂತಹ ರೆಡ್‌ಕ್ರಾಸ್ ಸಂಸ್ಥೆಗೆ ಪ್ರತಿಯೊಬ್ಬರು ಸದಸ್ಯತ್ವವನ್ನು ಪಡೆದುಕೊಳ್ಳಬೇಕು. ವಿಶೇಷತೆಯ ಹೆಸರಿನಲ್ಲಿ ಅದ್ದೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಯವನ್ನು ಹಾಳು ಮಾಡಿಕೊಳ್ಳದೇ ರಕ್ತದಾನ ಶಿಬಿರದಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಬ್ಲಡ್ ಬ್ಯಾಂಕಿನಲ್ಲಿ ರಕ್ತದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಗರ್ವನರ್ ಕೃಷ್ಣಮೂರ್ತಿ, ಅಧ್ಯಕ್ಷ ಮಹೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.