ಕೋಲಾರ

ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಕೆಜಿಎಫ್, ಮಾ.21
ಶ್ರೀಲಂಕಾ ಅಧ್ಯಕ್ಷ ರಾಜಪಕ್ಷೆ ವಿರುದ್ಧ ಅಮೆರಿಕ ಯುಎನ್‌ಐ ಸಭೆಯಲ್ಲಿ ಮಂಡಿಸಿರುವ ಮಾನವ ಹಕ್ಕು ಉಲ್ಲಂಘನೆ ವರದಿ ಪರ ಮತ ಹಾಕುವಂತೆ ಒತ್ತಾಯಿಸಿ ಗ್ಲೋಬಲ್ ಅನಿಮಲ್ ರೆಸ್ಕ್ಯೂ ಮುಖಂಡ ಅನಿಮಲ್ ಮುರಳಿ ನೇತೃತ್ವದಲ್ಲಿ ಇಲ್ಲಿನ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬಾಯಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಶ್ರೀಲಂಕಾದಲ್ಲಿ ವಾಸಿಸುತ್ತಿರುವ ತಮಿಳರ ಮೇಲೆ ದೌರ್ಜನ್ಯ, ಕೊಲೆ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮಿಳಿಗರನ್ನು ಅತ್ಯಂತ ಕೀಳುಮಟ್ಟದಲ್ಲಿ ನಡೆಸಿಕೊಳ್ಳಲಾಗುತ್ತಿದೆ, ಅದೇ ರೀತಿ ಶ್ರೀಲಂಕಾದಲ್ಲಿ ತಮಿಳರ ಮೇಲೆ ನಿರಂತರವಾಗಿ ದಾಳಿ ನಡೆಸಿ ಅತಿ ಕ್ರೂರವಾಗಿ ಕೊಲ್ಲುವ ಮೂಲಕ, ಮಾವನ ಹಕ್ಕು ಉಲ್ಲಂಘನೆ ಮಾಡಿದ್ದು, ಅಲ್ಲಿನ ಅಧ್ಯಕ್ಷ ರಾಜಪಕ್ಷೆ ಕೂಡಲೇ ರಾಜಿನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಅದೇ ರೀತಿ ಶ್ರೀಲಂಕಾ ಸರ್ಕಾರ ಈವರೆಗೆ ಸುಮಾರು 90 ಸಾವಿರ ವಿಧವೆಯರಿಗೆ ಮಾಸಾಶನ ಸಹ ನೀಡುತ್ತಿಲ್ಲ. ಇದರಿಂದ ಬಡ ಕುಟುಂಬದವರು ಒಂಂದು ಹೊತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅಮೆರಿಕ ದೇಶ ಯುಎನ್‌ಐ ಸಭೆಯಲ್ಲಿ ಮಂಡಿಸಲಿರುವ ವರದಿ ಬೆಂಬಲಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಎಂ.ಭಕ್ತವತ್ಸಲಂ, ಮಾಜಿ ನಗರಸಭೆ ಅಧ್ಯಕ್ಷ ಪಿ.ದಯಾನಂದ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.