ಉತ್ತಮ ಚಿತ್ರಗಳಿಂದ ಸಮಾಜ ಪರಿವರ್ತನೆ ಸಾಧ್ಯ
ಕ.ಪ್ರ.ವಾರ್ತೆ ಮಾಲೂರು ಮಾ.25
ದೃಶ್ಯ ಮಾಧ್ಯಮ ಜನರಲ್ಲಿ ಹೆಚ್ಚು ಪರಿಣಾಮಕಾರಿ ಪ್ರಭಾವ ಬೀರುವುದರಿಂದ ಉತ್ತಮ ಚಿತ್ರಗಳನ್ನು ತಯಾರಿಸಿ ಪ್ರದರ್ಶಿಸುವ ಮೂಲಕ ಸಮಾಜವನ್ನು ಪರಿವರ್ತಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಡಿ.ಎಸ್. ವಿಶ್ವನಾಥ್ ಹೇಳಿದರು.
ದಕ್ಷಿಣ ಪ್ರಾದೇಶಿಕ ನಿರ್ಮಾಣ ಕೇಂದ್ರ ಸಮಾಚಾರ ಮತ್ತು ಪ್ರಸಾರ ಸಚಿವಾಲಯ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಓದುವುದಕ್ಕಿಂತ ದೃಶ್ಯ ಮಾಧ್ಯಮದಲ್ಲಿ ನೀಡುವ ಮಾಹಿತಿ ಜನರಲ್ಲಿ ಬೇಗ ಅರಿವು ಮೂಡುವುದರಿಂದ ಈ ಬರಗಾಲದ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಇತರೆ ವಿಷಯಗಳ ಚಲನ ಚಿತ್ರದ ಜೊತೆಗೆ ಮುಖ್ಯವಾಗಿ ಮಳೆ ನೀರು ಕೊಯ್ಲು, ಕುಡಿಯುವ ನೀರಿನಲ್ಲಿ ಪ್ಲೋರೈಡ್‌ಗಳ ಬಗ್ಗೆ ಹೆಚ್ಚು ಚಿತ್ರಗಳನ್ನು ಪ್ರದರ್ಶಿಸಬೇಕು ಎಂದರು.
ಸರ್ಕಾರವು ಜನತೆಯ ಆರೋಗ್ಯ ಹಾಗೂ ಉತ್ತಮ ಜೀವನ ಸೃಷ್ಟಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಚಲನಚಿತ್ರ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷರರನ್ನು ಸೇರಿಸಬೇಕಾಗಿದೆ. ಇಲಾಖೆ ಅಧಿಕಾರಿಗಳ ಜವಾಬ್ದಾರಿ ಪ್ರಶ್ನಿಸಬೇಕಾಗಿದೆ ಎಂದರು.
ದಕ್ಷಿಣ ಪ್ರಾದೇಶಿಕ ನಿರ್ಮಾಣ ಕೇಂದ್ರದ ಡೆಪ್ಯೂಟಿ ಡೈರೆಕ್ಟರ್ ಜನರಲ್ ಎಂ.ಇಲಂಗೋ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಅರಿವು ಮೂಡಿಸುವ ಜೊತೆಯಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗಿಸುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ 1948ರಲ್ಲಿ ಪ್ರಾರಂಭಗೊಂಡ ಫಿಲಂ ಡಿವಿಸನ್ 1982 ರಲ್ಲಿ ಬೆಂಗಳೂರಿನಲ್ಲಿ ದಕ್ಷಿಣ ಪ್ರಾದೇಶಿಕ ನಿರ್ಮಾಣ ಕೇಂದ್ರ ಸ್ಥಾಪಿಸಲಾಗಿದೆ. ಕಿರು ಚಿತ್ರಗಳ ನಿರ್ಮಾಣದಲ್ಲಿ ತೊಡಗಿದೆ. ಸಂಸ್ಥೆಯು ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಕಿರುಚಿತ್ರಗಳನ್ನು ನಿರ್ಮಿಸುತ್ತಿದ್ದು, ಮುಖ್ಯವಾಗಿ ಗ್ರಾಮಾಂತರ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು ಸಮಾಜ ಅಭಿವೃದ್ಧಿಗೆ ಸಂಬಂಧಿಸಿದ ಕಿರು ಚಿತ್ರಗಳನ್ನು ತಯಾರಿಸಲಾಗುತ್ತಿದೆ ಎಂದರು.
ಶಿಶು ಮತ್ತು ಮಕ್ಕಳ ಆಹಾರ, ಜೈವಿಕ ವ್ಯವಸಾಯದ ಅರ್ಗಾನಿಕ್ ಫಾರ್ಮಿಂಗ್, ಲಿವಿಂಗ್ ಲೆಜೆಂಡ್ ಡಾ.ರಾಜ್ ಸೇರಿದಂತೆ ಹಲವು ಮಹನೀಯರ ಹಾಗೂ ರೋಗಗಳ ಬಗ್ಗೆ ಅರಿವು ಮೂಡಿಸುವ 26 ಚಲನಚಿತ್ರಗಳನ್ನು ಈ ಎರಡು ದಿನ ಪ್ರದರ್ಶಿಸಲಾಗುತ್ತಿದ್ದು,ಪಟ್ಟಣದ ಸುತ್ತಮುತ್ತಲ ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ತಹಸೀಲ್ದಾರ್ ಎಚ್.ನಂಜಯ್ಯ, ಪುರಸಭೆ ಮುಖ್ಯಾಧಿಕಾರಿ ರೇಣುಕಾ, ಪ್ರಾಂಶುಪಾಲ ವೆಂಕಟಾಪ ಸತ್ಯಂ, ಆನಂದ್ ಮೂರ್ತಿ, ಆರೋಗ್ಯಾಧಿಕಾರಿ ರಾಜಣ್ಣ,ಉದಯ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

