ಕಾರ್ಯಕರ್ತರಿಗೆ 'ಕೈ' ಮುಗಿದ ವಾಣಿ
ಚಿಂತಾಮಣಿ: ಜನರು ಕ್ಷೇತ್ರದಲ್ಲಿ ಬದಲಾವಣೆ ಬಯಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತನ್ನನ್ನು ಅಧಿಕ ಮತಗಳಿಂದ ಜಯಗಳಿಸುವಂತೆ ಸಹಕರಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ವಾಣಿ ಕೃಷ್ಣಾರೆಡ್ಡಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ನಗರದ ಪಿಲ್ಟರ್ ಬಡ್ ಬಳಿ ಇರುವ ಅವರ ಸ್ವಗೃಹದ ಮುಂಭಾಗದಲ್ಲಿ ತಾಲೂಕಿನ ಮುರುಗಮಲ್ಲ, ಅಂಬಾಜಿದುರ್ಗ, ಕಸಬಾ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ದಿವಂಗತ ಮಾಜಿ ಸಚಿವ ಕೆಂ.ಎಂ.ಕೃಷ್ಣಾರೆಡ್ಡಿ ಅವರ ಮಗಳಾದ ನನ್ನನ್ನು ರಾಜಕೀಯ ಉತ್ತರಾಧಿಕಾರಿಯನ್ನಾಗಿ ಜನತೆ ಬಯಸಿದ ಕಾರಣಕ್ಕೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಥಿಸುತ್ತಿದ್ದೇನೆಂದು ತಿಳಿಸಿದರು.
ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶದವರೆಗೂ ಕಾಂಗ್ರೆಸ್ ಬಲಿಷ್ಠಗೊಳಿಸಲು ತಮ್ಮ ಎಲ್ಲರ ಸಹಕಾರ ನನಗೆ ಬೇಕೆಂದು ವಾಣಿಕೃಷ್ಣಾರೆಡ್ಡಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಶೇಕ್ ಮೌಲಾ, ತಾಲೂಕು ಪಂಚಾಯ್ತಿ ಸದಸ್ಯರಾದ ಸುಜಾತಮ್ಮ ಮುನಿರಾಜು, ಮುಖಂಡರಾದ ಆನೂರು ಸುಬ್ಬನ್ನ, ಗ್ಯಾಸ್ ಶ್ರೀನಿವಾಸ್, ಸೀಕಲ್ ರಾಜಕುಮಾರ್,ಕುರುಬೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟಸ್ವಾಮಿ, ಶಿವಾನಂದ, ಜಯಪ್ರಕಾಶ್‌ರೆಡ್ಡಿ, ತುಳಸಿ ರಾಮರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

