ಮಾಲೂರು: ತೀವ್ರ ಹೃದಯಘಾತದಿಂದ ಸಾವನ್ನಪ್ಪಿದ್ದ ಕರವೇ ರಾಜ್ಯ ಕಾರ್ಯದರ್ಶಿ ಹಾಗೂ ಜೆಡಿಎಸ್ನ ಪ್ರಧಾನ ಕಾರ್ಯದರ್ಶಿ ಎಸ್.ಪ್ರಕಾಶ್ ಅಂತ್ಯಕ್ರಿಯೆ ಶುಕ್ರವಾರ ಸಂಜೆ ನಡೆಯಿತು.
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಸಂಘಟನೆಯ ರಾಜ್ಯ ಹಾಗೂ ಜಿಲ್ಲಾಮಟ್ಟದ ಪದಾಧಿಕಾರಿಗಳು, ಜೆಡಿಎಸ್ನ ಜಿಲ್ಲಾ ಮುಖಂಡರು ಪಾಲ್ಗೊಂಡಿದ್ದರು. ಆಟೋ ಮಾಲಿಕರ ಸಂಘದವರು ಆಟೋಗಳೊಂದಿಗೆ ಮೆರವಣಿಯಲ್ಲಿ ಭಾಗವಹಿಸಿದ್ದರು.