ಜೆಡಿಎಸ್ ಮುಖಂಡ ಎಸ್. ಪ್ರಕಾಶ್ ನಿಧನಕ್ಕೆ ಸಂತಾಪ

Updated on: 

ಕೋಲಾರ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ, ಕನ್ನಡಪರ ಹೋರಾಟಗಾರ ಎಸ್.ಪ್ರಕಾಶ್ ನಿಧನಕ್ಕೆ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಕನ್ನಡಪರ, ಪ್ರಗತಿಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಪ್ರಕಾಶ್ ನಿಧನದಿಂದ ಜಿಲ್ಲೆಗೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ಮಾಲೂರು ತಾಲೂಕು ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಪ್ರಕಾಶ್ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com