ಕೋಲಾರ

ವಿದ್ಯಾರ್ಥಿಗಳಿಗೆ ಸೀಮಿತವಾದ ಕನ್ನಡ ರಾಜ್ಯೋತ್ಸವ ಆಚರಣೆ

Published On :

ಗುಡಿಬಂಡೆ: ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ 58ನೇ ಕನ್ನಡ ರಾಜ್ಯೋತ್ಸವ ಕೇವಲ ವಿದ್ಯಾರ್ಥಿ ಮತ್ತು ಸರ್ಕಾರಿ ನೌಕರರಿಗೆ ಎಂಬಂತೆ ಆಚರಣೆ ಮಾಡಲಾಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಮರನಾರಾಯಣ ಮಾತನಾಡಿ, ಸಾರ್ವಜನಿಕರೊಂದಿಗೆ ಆಚರಿಸಬೇಕಾದ ಕನ್ನಡ ರಾಜ್ಯೋತ್ಸವ ಕೇವಲ ಶಾಲಾ ಮಕ್ಕಳೊಂದಿಗೆ ಆಚರಿಸುತ್ತಿರುವುದು ವಿಷಾದನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕನ್ನಡ ಬೆಳೆಸಲು ಪ್ರಮುಖವಾಗಿ ಶಾಲೆಯ ಶೀಕ್ಷಕರು ಶಾಲೆಗಳಲ್ಲಿ ಕನ್ನಡವನ್ನೇ ಮಾತಾಡುವುದರ ಮೂಲಕ ಹಾಗೂ ಸರ್ಕಾರಿ ಅಧಿಕಾರಿಗಳು ಕನ್ನಡದಲ್ಲೇ ವ್ಯವಹರಿಸುವುದರಿಂದ ಕನ್ನಡ ಭಾಷೆ ಉಳಿಯಲು ಸಾಧ್ಯವೆಂದರು.
ಈ ವೇಳೆ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಬಿಎ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸದವರಿಗೆ ಬಹುಮಾನ ವಿತರಿಸಲಾಯಿತು. ನಂತರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶೈಲಜಾ, ಜಿಪಂ ಸದಸ್ಯ ಅಶ್ವತ್ಥಪ್ಪ, ಬಿಇಒ ರವಿಕುಮಾರ್, ಪಪಂ ಮುಖ್ಯಾಧಿಕಾರಿ ಶ್ರೀರಾಮರೆಡ್ಡಿ, ತೋಟಗಾರಿಕೆ ಸಹಾಯಕ ನಿರ್ದೇಶಕ ರವಿಕುಮಾರ್, ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ್, ರೇಷ್ಮೆ ನಿರೀಕ್ಷಕ ಮ.ಗ. ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.