ಕೋಲಾರ

ವ್ಯವಸ್ಥಾಪಕರ ನಿಂದನೆ; ನಿರ್ವಾಹಕನ ಆತ್ಮಹತ್ಯೆ ಯತ್ನ

Published On :

ಕೆಜಿಎಫ್: ಕೆಲಸಕ್ಕೆ ರಜೆ ಹಾಕಿದ್ದನ್ನು ಪ್ರಶ್ನಿಸಿದ್ದಕೆ ಬೇಸರಗೊಂಡ ರಾಜ್ಯ ಸಾರಿಗೆ ಬಸ್ ನಿರ್ವಾಹಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ದೀಪಾವಳಿ ಹಾಗೂ ಇತರೆ ಹಬ್ಬಗಳು ಬರುತ್ತಿರುವುದರಿಂದ ಬಸ್ ಚಾಲಕರು ಮತ್ತು ನಿರ್ವಾಹಕರು ರಜೆಯನ್ನು ಪಡೆಯದೆ ಕಾರ್ಯನಿರ್ವಹಿಸಿ ಪ್ರಯಾಣಿಕರಿಗೆ ಅನುಕೂಲಕ್ಕೆ ಸಹಕರಿಸಬೇಕು ಎಂದು ಕೆಜಿಎಫ್ ಘಟಕದ ವ್ಯವಸ್ಥಾಪಕ ಅಪ್ಪಿರೆಡ್ಡಿ ಸೂಚಿಸಿದ್ದರು ಎನ್ನಲಾಗಿದೆ.
ನಿರಂತರವಾಗಿ ಕಾರ್ಯನಿರ್ವಹಿಸುತ್ತಿ ಬಸ್ ನಿರ್ವಾಹಕ ಶಿವ ಎಂಬವರು ಕೆಲಸಕ್ಕೆ ರಜೆ ಹಾಕಿದ್ದರು. ಇದನ್ನು ವಿರೋಧಿಸಿದ್ದರಿಂದ ಬೇಸರಗೊಂಡ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸಹ ನಿರ್ವಾಹಕರು ಹಾಗೂ ಸಿಬ್ಬಂದಿ ಶಿವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರಿಂದ ಪ್ರಾಣಕ್ಕೆ ಯಾವುದೇ ತೊಂದರೆಯಾಗಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಕೋಲಾರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ರಾಬರ್ಟ್ಸನ್ಪೇಟೆ ವೃತ್ತನಿರೀಕ್ಷಕ ಲಕ್ಷ್ಮೀನಾರಾಯಣ ಹಾಗೂ ಪಿಎಸ್ಐ ರಂಗಶಾಮಯ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.