ಗಡಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ
ಚಿಕ್ಕಬಳ್ಳಾಪುರ: ನಗರದ ಶಿಡ್ಲಘಟ್ಟ ವೃತ್ತದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕನ್ನಡ ನಾಡ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾ ಮತ್ತು ತಾಲೂಕು ಘಟಕದ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ 58ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಮಾತೆಗೆ ಜೈಕಾರಗಳನ್ನು ಕೂಗಿ ತಾಯಿ ಭುವನೇಶ್ವರಿ ದೇವಿಯ ಗುಣಗಾನ ಮಾಡಲಾಯಿತು.
ಚುಟುಕು ಸಾಹಿತ್ಯ ಪರಿತ್ತಿನ ಜಿಲ್ಲಾಧ್ಯಕ್ಷ ಪಿ.ಎಂ. ಚಲಪತಿ ಗೌಡ ಮಾತನಾಡಿ, ಕನ್ನಡ ನಾಡು ನುಡಿ, ಗಡಿ, ಜಲವನ್ನು ಕನ್ನಡಿಗರಾದ ನಾವುಗಳು ರಕ್ಷಿಸಿಕೊಳ್ಳಬೇಕಾದ ಜವಾಬ್ದಾರಿಯು ಈಗ ಹೆಚ್ಚಾಗಿದೆ ಎಂದ ಅವರು, ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ ಆಧುನಿಕತೆಯ ವೈಭವೀಕರಣದ ಸೋಗಿನಲ್ಲಿ ನಮ್ಮ ತಾಯಿ ಭಾಷೆಯನ್ನು ಮರೆಯುತ್ತಿರುವುದು ದುರದೃಷ್ಟಕರ. ನಮ್ಮ ನಾಡನ್ನು ಕಟ್ಟಿದ ಮಹನೀಯರ ಪರಿಚಯ ಇಂದಿನ ಪೀಳಿಗೆಯ ಸ್ಮೃತಿ ಪಟಲದಲ್ಲಿ ದಿನೇ ದಿನೇ ಅಳಸಿಹೋಗುತ್ತಿರುವುದು ಕನ್ನಡಿಗರು ಎತ್ತ ಸಾಗುತ್ತಿದ್ದೇವೆಂಬುದರ ಸಂಕೇತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಎಲ್ಲಾ ಭಾಷೆಗಳನ್ನು ಪ್ರೀತಿಸುವುದರ ಮೂಲಕ ನಮ್ಮ ತಾಯಿ ಭಾಷೆಗೆ ಮನ್ನಣೆಯನ್ನು ಕೊಟ್ಟು, ಕನ್ನಡವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಗೌರವಾಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ ಮಾತನಾಡಿ, ಶಾತವಾಹನರಿಂದ ಹಿಡಿದು ಕನ್ನಡ ನಾಡಿನ ಕೀರ್ತಿಯ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಅನೇಕ ಮಹನೀಯರು ಜನಿಸಿ ನಮ್ಮ ನಾಡಿನ ಕೀರ್ತಿಯನ್ನು ಬೆಳಗಿಸಿದ್ದಾರೆ.
ಇಂತಹ ನಾಡಿನಲ್ಲಿ ಜನಿಸಿದ ನಾವುಗಳು ಇಂದು ಕನ್ನಡ ಭಾಷೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿ ತೊಳಲಾಡುತ್ತಿದ್ದೇವೆ ಎಂದ ಅವರು, ಮಾತೃಭಾಷೆಯನ್ನು ರಕ್ಷಿಸಿಕೊಳ್ಳಲು ಏಕರೂಪ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ,ಕನ್ನಡಿಗರಿಗೆ ಉದ್ಯೋಗ ದೊರಕುವಂತಾಗಲು ಸರೋಜಿನಿಮಹಿಷಿ ವರದಿಯನ್ನು ಜಾರಿಗೊಳಿಸಬೇಕೆಂದರು.
ತಾಲೂಕು ಅಧ್ಯಕ್ಷ ಗೋವಿಂದರಾಜು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಅಮೃತ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ನಾಗಭೂಷಣ್ ರೆಡ್ಡಿ, ಆದಿನಾರಾಯಣ, ಪ್ರಧಾನ ಕಾರ್ಯದರ್ಶಿ ಸಿ.ಎಸ್. ನಾಗರಾಜ್, ವೆಂಕಟೇಶ್, ಪ್ರಕಾಶ್, ಶ್ರೀನಿವಾಸ್, ಅಶ್ವತ್ಥನಾರಾಯಣ, ಸುಶೀಲಮಂಜುನಾಥ್, ಸೌಭಾಗ್ಯ ಆನಂದ್, ರಮಣ್, ಜಯಂತ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

