ಕೋಲಾರ

ಉನ್ನತ ಶಿಕ್ಷಣದಿಂದ ಮಾತ್ರ ಸಮಗ್ರ ಪ್ರಗತಿ

Published On :

ಬಂಗಾರಪೇಟೆ: ಭಾರತ ದೇಶ ಶೈಕ್ಷಣಿಕವಾಗಿ ಬಲಿಷ್ಟ ದೇಶವಾದಾಗ ಮಾತ್ರ ಮುಂದುವರೆದ ದೇಶಗಳ ಸಾಲಿನಲ್ಲಿ ಮುಂಚೂಣಿಯಲ್ಲಿರಲು ಸಾಧ್ಯವಾಗಿದ್ದು ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕಲ್ಪಿಸುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ತೊಪ್ಪನಹಳ್ಳಿ ಹಾಗೂ ಕನಮನಹಳ್ಳಿ ಗ್ರಾಮಗಳಲ್ಲಿ ರಾಷ್ಟ್ರೀಯ ಮಾದ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಒಟ್ಟು 1.53 ಕೋಟಿ ವೆಚ್ಚದಲ್ಲಿ 20 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಾ ಪ್ರತಿಯೊಬ್ಬರು ಅಕ್ಷರ ಜ್ಞಾನ ಹೊಂದಿದಾಗ ಮಾತ್ರ ದೇಶ ತಾನಾಗೇ ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಪೋಷಕರು ಕಾನ್ವೆಂಟ್ ಶಾಲೆಗಳತ್ತ ಆಕರ್ಷಿತರಾಗಿರುವುದು ದುರದೃಷ್ಟಕರ ಸಂಗತಿಯಾಗಿದೆ ಕಾನ್ವೆಂಟ್ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳಿಗೆ ಶಿಕ್ಷಣ ಹೊರೆಯಾಗದಂತೆ ಎಲ್ಲಾ ಉಚಿತವಾಗಿ ಸಿಗುವ ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವಂತೆ ಕೋರಿ ತೊಪ್ಪನಹಳ್ಳಿ ಗಡಿ ಭಾಗದಲ್ಲಿದ್ದರೂ ಫಲಿತಾಂಶದಲ್ಲಿ ತಾಲೂಕಿಗೆ ಪ್ರಥಮ ಸ್ಥಾನದಲ್ಲಿರುವುದನ್ನು ಶಾಲೆ ಶಿಕ್ಷಕರ ಶ್ರಮವನ್ನು ಅಭಿನಂದಿಸಿದರು.ಇತ್ತೀಚಿಗೆ ಹಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡು ರೈತರು ಮೊದಲೇ ಸಂಕಷ್ಟದಲ್ಲಿದ್ದ ರೈತರನ್ನು ಮತ್ತಷ್ಟು ಆತಂಕಗೊಳ್ಳುವಂತೆ ಮಾಡಿದ್ದು ಈ ಭಾಗದ ರೈತರಿಗೆ ಅನುಕೂಲವಾಗಲೆಂದು ತೊಪ್ಪನಹಳ್ಳಿ ಗ್ರಾಮದಲ್ಲಿ 1.50 ಕೋಟಿ ವೆಚ್ಚದಲ್ಲಿ ಪಶು ಆಸ್ಪತ್ರೆ ನಿರ್ಮಿಸಲಾಗುತ್ತಿದೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ವಸತಿ ನಿಲಯಕ್ಕೂ ಸ್ವಂತ ಕಟ್ಟಡ ಭಾಗ್ಯ ಕಲ್ಪಿಸಲಾಗಿದೆ.ದಾನಿಗಳು ಜಮೀನು ಮೀಡಲು ಮುಂದೆ ಬಂದರೆ ಈ ಭಾಗದಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಲು ಮುಂದಾಗುವುದಾಗಿ ಭರವಸೆ ನೀಡಿ ರೈತರಿಗೆ ಅಧಿಕಾರಿ ವರ್ಗದಿಂದ ತೊಂದರೆ ಉಂಟಾದಲ್ಲಿ ನೇರವಾಗಿ ತಮ್ಮ ಗಮನಕ್ಕೆ ತರಬೇಕೆ ವಿನ- ಮಧ್ಯವರ್ತಿಗಳನ್ನು ಅವಳಂಬಿಸಬಾರದು ಎಂದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಪಾರ್ಥಸಾರಥಿ, ಮಂಜುನಾಥಗೌಡ, ಮುಖಂಡರಾದ ಚಂಗಲರಾಯರೆಡ್ಡಿ,ಚಾಮುಂಡಿಗೌಡ, ಪಿಚ್ಚಹಳ್ಳಿ ಗೋವಿಂದರಾಜು,ಶ್ರೀನಿವಾಸರೆಡ್ಡಿ,ಶ್ರೀನಿವಾಸಮೂರ್ತಿ, ಲಕ್ಷ್ಮೀನಾರಾಯಣ, ಶಂಕರೇಗೌಡ, ಚಲಪತಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.