ಕಬಡ್ಡಿ: ಚಿತ್ರಪಿನಾಕಿನಿ ಪ್ರೌಢಶಾಲೆ ಬಾಲಕಿಯರಿಗೆ ಪ್ರಥಮ ಸ್ಥಾನ
ಚಿಕ್ಕಬಳ್ಳಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 2013-14ನೇ ಸಾಲಿನ ಬೆಂಗಳೂರು ವಿಭಾಗ ಮಟ್ಟದ ಪ್ರೌಢ ಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾವಳಿಗಳಲ್ಲಿ ಚಿಕ್ಕಬಳ್ಳಾಪುರದ ಶ್ರೀ ಚಿತ್ರಪಿನಾಕಿನಿ ಪ್ರೌಢಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಗಳಿಸಿದ್ದಾರೆ. ಇದರಿಂದ ನ.15ರಿಂದ ಉಜಿರೆಯಲ್ಲಿ ಪ್ರಾರಂಭವಾಗುವ ರಾಜ್ಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಬಾಲಕಿಯರ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಧುಗಿರಿ ತಂಡದ ವಿರುದ್ಧ, ಸೆಮಿಫೈನಲ್ನಲ್ಲಿ ಬಲಿಷ್ಠ ದಾವಣಗೆರೆ ತಂಡದ ವಿರುದ್ಧ ಮತ್ತು ಫೈನಲ್ನಲ್ಲಿ ರಾಮನಗರ ತಂಡದ ವಿರುದ್ಧ 32-16 ಅಂಕಗಳ ಅಂತರದಲ್ಲಿ ಜಯ ಗಳಿಸಿ ಪ್ರಥಮ ಸ್ಥಾನವನ್ನು ಗಳಿಸುವುದರೊಂದಿಗೆ ರಾಜ್ಯ ಮಟ್ಟದ ಪಂದ್ಯಾವಳಿಗೆ ಅರ್ಹತೆ ಗಳಿಸಿದ್ದು ಈ ಸಾಧನೆಗೆ ಚಿಕ್ಕಬಳ್ಳಾಪುರ ಜಿಲ್ಲಾ ದೈಹಿಕ ಶಿಕ್ಷಣ ಪ್ರಭಾರಿ ಅಧೀಕ್ಷಕ ಪಿ. ಮುನಿಸ್ವಾಮಿ, ಶಾಲಾ ದತ್ತಿಯ ಅಧ್ಯಕ್ಷ ರಾಮಚಂದ್ರಪ್ಪ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ಕೆ. ವಿ. ನವೀನ್ ಕಿರಣ್ ಮತ್ತು ಕಾರ್ಯದರ್ಶಿ ಡಾ. ಅಮರೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

