ಅತಿಥಿ ಉಪನ್ಯಾಸಕರ ಕಡಗಣನೆಗೆ ತೀವ್ರ ಖಂಡನೆ
ಕನ್ನಡಪ್ರಭ ವಾರ್ತೆ, ಕೋಲಾರ, ನ.5
ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು ಇಲ್ಲಿಯ ತನಕ ಸ್ಪಂದಿಸದೇ ಕಾಲಹರಣ ಮಾಡುತ್ತಿರುವುದು ಖಂಡನೀಯ ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಗೌರವಾಧ್ಯಕ್ಷರು ಹಾಗೂ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಿ. ರಾಜಶೇಖರಮೂರ್ತಿ ಟೀಕಿಸಿದರು.
ನಗರದ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಪ್ರಥಮ ದರ್ಜೆಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಕಳೆದ ನಾಲ್ಕೈದು ತಿಂಗಳಿನಿಂದ ಸತತವಾಗಿ ಹೋರಾಟಗಳು, ಸಮಾವೇಶಗಳನ್ನು ಮಾಡಿ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಶೀಘ್ರವಾಗಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ರೀತಿಯ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಅತಿಥಿ ಉಪನ್ಯಾಸಕರಿಗೆ ಅತ್ಯಂತ ಕಡಿಮೆ ವೇತನವನ್ನು ನೀಡಲಾಗುತ್ತಿದೆ, ಪಕ್ಕದ ಕೇರಳ, ತಮಿಳುನಾಡು, ಅಂಧ್ರಪ್ರದೇಶದಲ್ಲಿ ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ರೀತಿ ವೇತನ ಮತ್ತು ಇತರೇ ಸೌಲಭ್ಯಗಳನ್ನು ನೀಡಬೇಕು. ಮುಖ್ಯವಾಗಿ ವೇತನ ಹೆಚ್ಚಳದ ಜೊತೆಗೆ ಮುಂದಿನ ಶೈಕ್ಷಣಿಕ ವರ್ಷಕ್ಕೂ ಸಹ ಇದೇ ಅತಿಥಿ ಉಪನ್ಯಾಸಕರನ್ನು ಮುಂದುವರೆಸಬೇಕು, ಗರ್ಭಿಣಿ ಮತ್ತು ಹೆರಿಗೆಯಾದ ಮಹಿಳಾ ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ರಜೆಯನ್ನು ನೀಡಬೇಕು ಎಂದು ಒತ್ತಾಯಿಸಿದರಲ್ಲದೇ ಅತಿಥಿ ಉಪನ್ಯಾಸಕರು ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ಸಂಘಟಿತರಾಗಬೇಕೆಂದು ಮನವಿ ಮಾಡಿದರು.
ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್. ಶ್ರೀನಿವಾಸಾಚಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಫಯಾಜ್ ಮಾನಾಡಿದರು. ಅತಿಥಿ ಉಪನ್ಯಾಸಕರ ಸಂಘದ ಮುಖಂಡರಾದ ಅಮರಾವತಿ, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ವಿ. ಸಂಪಂಗಿ ಇದ್ದರು, ಆರ್. ಚೌಡರೆಡ್ಡಿ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿದ್ದರು, ಲಕ್ಷ್ಮೀನಾರಾಯಣ ಸ್ವಾಗತಿಸಿ, ರಮಾನಂದ ನಿರೂಪಿಸಿದರು.
ಜಿಲ್ಲಾ ಸಮಿತಿ ರಚನೆ: ಇದೇ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಸ್.ಎಂ. ರಮಾನಂದ, ಉಪಾಧ್ಯಕ್ಷರಾಗಿ ಬಿ.ಎನ್.ಅಮರಾವತಿ, ಎಂ.ಪಿ. ಶೃತಿ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ, ಸಹ ಕಾರ್ಯದರ್ಶಿಯಾಗಿ ಡಾ.ಶ್ರೀನಿವಾಸ್, ಶ್ರೀದೇವಿ, ಖಜಾಂಚಿಯಾಗಿ ಆರ್. ಚೌಡರೆಡ್ಡಿ, ಸಂಘಟನಾ ಕಾರ್ಯದರ್ಶಿಯಾಗಿ ರತ್ನಂ, ಎ.ಬಿ. ರಮೇಶ್, ಸಂದೀಪ್, ಸದಸ್ಯರಾಗಿ ವೆಂಕಟೇಶಬಾಬು, ವಿನಯ್, ಸವಿತ, ಎಂ.ಎಲ್. ಶ್ರೀದೇವಿ, ಸುನೀಲ್, ಬಾಲಾಜಿ, ಪುಷ್ಪ, ವನಿತ, ರಾಜೇಶ್, ವೇಣು, ಮುನಿರಾಜು, ಪ್ರಿಯಾ, ವೀಣಾವತಿ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

