ಕೋಲಾರ

ಅಪರಿಚಿತ ವಾಹನ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು

Published On :

ಕೆಜಿಎಫ್: ದ್ವಿಚಕ್ರ ವಾಹನ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಡ್ರಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ  ಸುಮಾರು 6 ಗಂಟೆಗೆ ಸಂಭವಿಸಿದೆ. ಬೀರನಕುಪ್ಪ ಗ್ರಾಮದ ನಿವಾಸಿ ಕೃಷ್ಣಪ್ಪ ಎಂಬುವರ ಮಗನಾದ ಶಂಕರ್(21) ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಶಂಕರ್ ಲಕ್ಷ್ಮೀಸಾಗರ ದಿಂದ ಆಂಡ್ರಸನ್ಪೇಟೆ ಕಡೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಅತಿ ವೇಗವಾಗಿ ಬಂದ ಅಪರಿಚಿತ ಟಾಟಾ ಸುಮೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಂಕರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತಪಟ್ಟ ಶಂಕರ್ಗೆ ಕಳೆದ 6 ತಿಂಗಳಷ್ಟೆ ಮದುವೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಆಂಡ್ರಸನ್ಪೇಟೆ ಪೊಲೀಸ್ ಠಾಣಾ ಪಿಎಸ್ಐ ಎಲ್. ಆಂಜಪ್ಪ ಡಿಕ್ಕಿ ಹೊಡೆದು ಪರಾರಿಯಾದ ಟಾಟಾಸುಮೋ ವಾಹನದ ಪತ್ತಗೆ ಕ್ರಮ ಕೈಗೊಂಡಿದ್ದಾರೆ.
ಚಿಂತಾಮಣಿ ಆಸ್ಪತ್ರೆ ಕರ್ಮಕಾಂಡ ಗಮನಿಸಿ...
ಚಿಂತಾಮಣಿ: ಸಾರ್ವಜನಿಕರ ಆಸ್ಪತ್ರೆ ಕರ್ಮಕಾಂಡದ ಬಗ್ಗೆ ಕರವೇ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದರು. ಪಟ್ಟಣದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಇಂದು ಆಗಮಿಸಿದ್ದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಸಚಿವರಾದ ದಿನೇಶ್  ಗುಂಡೂರಾವ್ಗೆ ಪಟ್ಟಣದಲ್ಲಿನ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲಗೊಂಡಿದ್ದಾರೆಂದು ಕರವೇ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.