ರಂಗೋಲಿ ಹಾಕುತ್ತಿದ್ದ ಮಹಿಳೆ ಸರ ಅಪಹರಣ
ಚಿಂತಾಮಣಿ: ಮನೆ ಮುಂಭಾಗದಲ್ಲಿ ಮಹಿಳೆಯೊಬ್ಬರು ರಂಗೋಲಿ ಹಾಕುತ್ತಿರುವಾಗ ಅಪರಿಚಿತ ಯುವಕರು ಇಬ್ಬರು ಮಿಂಚಿನಂತೆ ಬಂದು ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಅಪಹರಿಸಿಕೊಂಡು ಹೋಗಿರುವ ಘಟನೆ ಗುಂಡಪ್ಪ ಲೇಔಟ್ನಲ್ಲಿ ನಡೆದಿದೆ.
ಪಟ್ಟಣದ ಪ್ರತಿಷ್ಠಿತ ಬಡಾವಣೆಯಾದ ಗುಂಡಪ್ಪ ಲೇಔಟ್ನಲ್ಲಿ ಇರುವ ಡಾ. ರಾಘವೇಂದ್ರರವರು ಕನಂಪಲ್ಲಿಯ ಹಾಲು ಶೀಥಲೀಕರಣ ಕೇಂದ್ರದಲ್ಲಿ ಪಶು ವೈದ್ಯರಾಗಿರುವ ತಾಯಿ ಪ್ರಭಾವತಿ ಮನೆ ಮುಂಭಾಗದಲ್ಲಿ ರಂಗೋಲಿ ಹಾಕುತ್ತಿರುವಾಗ ಅಪರಿಚಿತ ಯುವಕರಿಬ್ಬರು ಸುಮಾರು 20 ಗ್ರಾಂ ತೂಕವುಳ್ಳ ಬಂಗಾರದ ಸರವನ್ನು ಅಪಹರಿಸಿಕೊಂಡು ಹೋಗಿರುವುದಾಗಿ ಪೊಲೀಸರ ದೂರಿನಲ್ಲಿ ಮೋಸ ಹೋದ ಮಹಿಳೆ ದೂರು ನೀಡಿದ್ದಾರೆ. ಇದರ ಒಟ್ಟು ಮೌಲ್ಯ 60 ಸಾವಿರ ರು. ಎಂದು ಪೊಲೀಸರಿಗೆ ವಿವರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ವೃತ್ತ ನಿರೀಕ್ಷಕ ನಂಜಪ್ಪ ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶವ ಪತ್ತೆ: ಯುವಕನೊಬ್ಬನ ಶವ ಗವಿ ಗಂಗಾಧರೇಶ್ವರ ತಪ್ಪಲಿನಲ್ಲಿ ಕಾಣಿಸಿಕೊಂಡಿದೆ. ಪಟ್ಟಣದ ಹೊರ ವಲಯದಲ್ಲಿರುವ ಗವಿ ಗಂಗಾಧರೇಶ್ವರ ಬೆಟ್ಟದ ತಪ್ಪಲಿನಲ್ಲಿ ಕಳೆದ 15 ದಿನಗಳ ಹಿಂದೆ ಮರದ ಕೊಂಬೆಯೊಂದಕ್ಕೆ ನೇಣು ಹಾಕಿಕೊಂಡಿರುವ ರೀತಿಯಲ್ಲಿ ಶವವು ಅಸ್ಥಿಪಂಜರ ಮಾದರಿಯಲ್ಲಿ ಇರುವ ಬಗ್ಗೆ ದನ ಮೇಯಿಸುವ ಹುಡುಗರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ನಂತರ ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

