ಶಾಲಾ ವಾಹನ ಪಲ್ಟಿ; ಮಕ್ಕಳಿಗೆ ಸಣ್ಣ ಪುಟ್ಟ ಗಾಯ
ಮುಳಬಾಗಲು: ತಾಲೂಕಿನ ಮಂಡಿಕಲ್ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಬೆಳಗ್ಗೆ ಶಾಲಾ ವಾಹನ ಉರುಳಿ ಬಿದ್ದ ಪರಿಣಾಮ, ಹಲವು ಶಾಲಾ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇದನ್ನು ಗಮನಿಸಿದ ಹೊಲದ ಬಳಿ ಇದ್ದ ಸುಧೀಂದ್ರರಾವ್, ಫಯಾಜ್, ಮಂಜುನಾಥ್ ವೆಂಕಟರವಣ ಮಕ್ಕಳನ್ನು ಹೊರಗೆ ಎಳೆದು ಹಾಕಿದ್ದಾರೆ. ಅದೃಷ್ಟವಶಾತ್ ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾದ ಮಕ್ಕಳಿಗೆ ಮುಳಬಾಗಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಗ್ರಾಮದ ಸರ್ಕಾರಿ ಅಸ್ಪತ್ರೆಗೆ ಎಷ್ಟು ಹೊತ್ತಿಗೂ ವೈದ್ಯರಾಗಲಿ, ಸಿಬ್ಬಂದಿಯಾಗಲಿ ಬಾರದ ಬಗ್ಗೆ ಮಕ್ಕಳ ಪಾಲಕರು ಮತ್ತು ಸಾರ್ವಜನಿಕರು ಆಸ್ಪತ್ರೆ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಕೋಲಾರ ಜಿಲ್ಲಾ ಆರೋಗ್ಯಧಿಕಾರಿ ಡಾ.ಫಯಾಜ್ಖಾನ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ತಾಪಂ ಅಧಿಕಾರಿ ಅರುಣಕುಮಾರ್ ಪ್ರತಿಭಟನಾಕಾರನ್ನು ಶಾಂತಗೊಳಿಸಿದರು. ಶಾಲಾ ಆಡಳಿತ ಮಂಡಳಿಯವರು ಚಾಲಕರ ಮೇಲೆ ಅನಾಗತ್ಯವಾಗಿ ಇಂತಿಷ್ಚು ಸಮಯಕ್ಕೆ ಮಕ್ಕಳನ್ನು ಕರೆತರಲು ಒತ್ತಡ ಹೇರುವ ಕಾರಣ ಅಪಘಾತಗಳು ಸಂಭವಿಸುತ್ತಿವೆ ಎಂದು ಹೆಸರು ಹೇಳಲು ಇಚ್ಛಿಸದ ಶಾಲಾ ಮಕ್ಕಳ ಪಾಲಕರು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

