ಆರೋಗ್ಯ ಕೇಂದ್ರಕ್ಕೇ ಅನಾರೋಗ್ಯ!
ಬಂಗಾರಪೇಟೆ: ಗ್ರಾಮೀಣ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಎಲ್ಲ ಹೋಬಳಿ ಹಾಗೂ ಪಂಚಾಯ್ತಿ ಮಟ್ಟದಲ್ಲಿ ಆರೋಗ್ಯ ಉಪ ಕೇಂದ್ರಗಳನ್ನು ಆರಂಭಿಸಿದೆ. ಆದರೆ ಆರೋಗ್ಯ ಸಚಿವ ಯು.ಟಿ.ಖಾದರ್ ಉಸ್ತುವಾರಿಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಉಪ ಕೇಂದ್ರಗಳಲ್ಲಿ ಎಷ್ಟರ ಮಟ್ಟಿಗೆ ಗ್ರಾಮೀಣರ ಆರೋಗ್ಯ ಕಾಪಾಡುತ್ತಿದೆ ಎಂಬುದನ್ನು ತಿಳಿಯಬೇಕಾದರೆ ಮುಷ್ಟ್ರಹಳ್ಳಿ ಉಪ ಕೇಂದ್ರಕ್ಕೆ ಭೇಟಿ ನೀಡಬೇಕು. ಆಂಧ್ರಪ್ರದೇಶಕ್ಕೆ ಅಂಟಿಕೊಂಡಿರುವ ತಾಲೂಕಿನ ದೋಣಿಮಡಗು ಪಂಚಾಯ್ತಿಯ ಮುಷ್ಟ್ರಹಳ್ಳಿ ಗ್ರಾಮದಲ್ಲಿ ಆರಂಭಿಸಿರುವ ಆರೋಗ್ಯ ಉಪ ಕೇಂದ್ರ ಪ್ರಾರಂಭದಲ್ಲಿ ಒಂದೆರಡು ತಿಂಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ನಂತರ ಶಾಶ್ವತವಾಗಿ ಕೇಂದ್ರಕ್ಕೆ ಬೀಗ ಹಾಕಲಾಗಿದೆ. ಈ ಪ್ರದೇಶದ ಜನರ ಆರೋಗ್ಯ ಕೈ ಕೊಟ್ಟರೆ ಆಸ್ಪತ್ರೆಗಾಗಿ ಸುಮಾರು 30 ಕಿಮೀ ದೂರದ ಬಂಗಾರಪೇಟೆ ಅಥವಾ ಕೆಜಿಎಫ್ನ ಸರ್ಕಾರಿ ಆಸ್ಪತ್ರೆಗೆ ಹೋಗಬೇಕು. ಗೊಂದಲ ಬೇಡವೆಂದು ಈ ಪಂಚಾಯ್ತಿಯ ಬಹುತೇಕ ಜನರು ಗಡಿದಾಟಿದರೆ ಸಿಗುವ ಕುಪ್ಪಂ ಪಟ್ಟಣಕ್ಕೆ ಹೋಗುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಯು.ಟಿ.ಖಾದರ್ ಉಸ್ತುವಾರಿ ವಹಿಸಿರುವ ಜಿಲ್ಲೆಯಲ್ಲೇ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಚಿಂತಾಜನಕವಾಗಿದೆ.ಯಾರೋ ಮೇಲಾಧಿಕಾರಿಗಳು,ಲೋಕಾಯುಕ್ತರು ಮತ್ತು ಹೊಸದಾಗಿ ಅಧಿಕಾರಕ್ಕೆ ಬರುವ ಜನಪ್ರತಿನಿಧಿಗಳು ಮೊದಲು ಸರ್ಕಾರಿ ಆಸ್ಪತ್ರೆಗಳಿಗೆ ಬೇಟಿ ನೀಡುವರು ಭರವಸೆಗಳನ್ನೇ ಜನರಿಗೆ ಕೊಡುವರು ಇದರಿಂದ ಜನರು ಹರ್ಷಗೊಳ್ಳುವರು ನಂತರ ಯಥಾಸ್ಥಿತಿಯಲ್ಲೇ ಮುಂದುವರೆಯುವುದು ಸ್ಥಳೀಯ ಶಾಸಕನಾರಾಯಣಸ್ವಾಮಿ ಈ ಧರ್ಮಾಸ್ಪತ್ರೆ ಹೆಸರಿಗೆ ತಕ್ಕಂತೆ ಕೆಲಸ ಮಾಡಲು ಶ್ರಮಿಸುತ್ತಿದ್ದಾರೆ ಎಂದು ಇವರ ಆಸೆ ಕೈಗೂಡುವುದೋ ನೋಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

