ಕೋಲಾರ

ಕಾಲೇಜಿನಲ್ಲಿ ಶೌಚಾಲಯ ನಿರ್ಮಾಣಕ್ಕೆ ರು. 2 ಲಕ್ಷ

Published On :

ಕೋಲಾರ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ತನ್ನ ಅನುದಾನದಲ್ಲಿ ಎರಡು ಲಕ್ಷ ರು.ಗಳನ್ನು ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಭರವಸೆ ನೀಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಶೌಚಾಲಯಗಳ ದುಸ್ಥಿತಿಯನ್ನು ತಿಳಿಸಿದಾಗ, ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡ ಡಿ.ಎಸ್. ವೀರಯ್ಯ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ 2 ಲಕ್ಷ ರು.ಬಿಡುಗಡೆ ಮಾಡಿಸುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿನ ಕಸದ ತೊಟ್ಟಿಯನ್ನು ಕಂಡು ಬೇಸತ್ತ ವೀರಯ್ಯನವರು, ಪ್ರತಿ ದಿನ ಘನತಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿದಲ್ಲಿ ಕಾಲೇಜಿನ ಪರಿಸರ ಚನ್ನಾಗಿರುತ್ತದೆ ಎಂದು ಸಲಹೆ ನೀಡಿದರು. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕಾಲೇಜಿನ ಮೈದಾನದಲ್ಲಿ ಕೊಳವೆಬಾವಿ ಕೊರೆಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ತಾತ್ಕಾಲಿಕವಾಗಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯ ಆಯುಕ್ತರೊಂದಿಗೆ ಮಾತನಾಡಿ ಟ್ಯಾಂಕರ್ಗಳ ಮೂಲಕ ನೀರಿನ ಸೌಲಭ್ಯ ಒದಗಿಸುವದಾಗಿ ತಿಳಿಸಿದರು.
ಉಪನ್ಯಾಸಕರಾದ ಜೆ.ಜಿ ನಾಗರಾಜ್, ಗೋಪಿಕೃಷ್ಣ ಅವರು ಕಾಲೇಜಿನ ಸಮಸ್ಯೆಗಳನ್ನು ವೀರಯ್ಯನವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮಾಜಿ ಅಧ್ಯಕ್ಷ ರಾಜೇಂದ್ರ, ಜಿಲ್ಲಾ ಉಪಾಧ್ಯಕ್ಷ ವಿಜಯ್ ಕುಮಾರ್, ಗಾಂಧಿನಗರ ವೆಂಕಟೇಶ್, ನಗರಾಧ್ಯಕ್ಷ ಜಯಂತಿಲಾಲ್, ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಕಾರ್ಯದರ್ಶಿ ಜಾಮೀನುಲ್ಲಾ ಖಾನ್, ನಗರ ಉಪಾಧ್ಯಕ್ಷ ರಾಜೇಶ್, ರಂಗಾರೆಡ್ಡಿ, ಸುರೇಶ್, ಚಲಪತಿ, ಮಹೇಶ್ ಕುಮಾರ್, ಎಬಿವಿಪಿ ಮುರಳಿ, ಎಸ್ಸಿ ಮೋರ್ಚಾ ನಗರ ಅಧ್ಯಕ್ಷ ರಾಜಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.