ಜಾತಿ ಆಧಾರಿತ ಮೀಸಲಾತಿ ಸಲ್ಲ
ಕೋಲಾರ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿಕೊಟ್ಟಿರುವ ಸಂವಿಧಾನದಲ್ಲಿ ಯಾವುದೇ ಒಂದು ಜಾತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮೀಸಲಾತಿ ಪ್ರಸ್ತಾಪಿಸಿಲ್ಲ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ಜಾತಿಯ ಜನರಿಗೂ ಮೀಸಲಾತಿ ಸೌಲಭ್ಯ ಸಿಗಬೇಕೆಂಬುದು ಇವರ ಆಶಯವಾಗಿತ್ತು ಎಂದು ನಗರದ ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ನಂದವಾಡಗಿ ತಿಳಿಸಿದರು.
ಅವರು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಉನ್ನತ ಶಿಕ್ಷಣ ಪಡೆಯಲು ಜಾತಿ ಆಧರಿಸಿ ಮೀಸಲಾತಿ ನೀಡುವುದು ಸಲ್ಲದು, ವಿದ್ಯಾರ್ಥಿಗಳ ಆರ್ಥಿಕ ಸ್ಥಿತಿಗತಿಗೆ ಅನುಗುಣವಾಗಿ ಮೀಸಲಾತಿ ಸೌಲಭ್ಯ ಕಲ್ಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಹೊಸದಾಗಿ 47 ಪದವಿ ಕಾಲೇಜುಗಳ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು ಜಾತಿ ಆಧರಿಸಿ ಮೀಸಲಾತಿ ಕೊಡಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ವಿದ್ಯಾರ್ಥಿ ವೇತನ: ರಾಜ್ಯ ಮತ್ತು ಕೇಂದ್ರ ಸರ್ಕಾರ ಈಗಾಗಲೇ ಕಾಲೇಜು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಯೋಜನೆ ಜಾರಿಗೆ ತಂದಿದ್ದು ಜಿಲ್ಲೆಯ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಟ್ರಸ್ಟ್ ವತಿಯಿಂದ ಯಾರಿಗೆ ಸರ್ಕಾರದ ವಿದ್ಯಾರ್ಥಿ ವೇತನ ಸಿಗುತ್ತಿಲ್ಲವೋ ಅಂತಹ ವಿದ್ಯಾರ್ಥಿನಿಯರಿಗೆ 15 ಲಕ್ಷ ರು.ಗಳನ್ನು ಮಂಜೂರು ಮಾಡಿದೆ ಎಂದರು. ಕಾಲೇಜಿಗೆ ಅನೇಕ ದಾನಿಗಳು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಇವರನ್ನು ಸ್ಮರಿಸುವುದು ಕಾಲೇಜಿನ ಆಡಳಿತ ವರ್ಗದ ಆಧ್ಯ ಕರ್ತವ್ಯ. ದಾನಿಗಳ ಪಟ್ಟಿಯನ್ನು ಅತಿ ಶೀಘ್ರವೇ ಪ್ರಕಟಿಸಲಾಗುತ್ತದೆ. ದೇಣಿಗೆ ರೂಪದಲ್ಲಿ ನೀಡುವವರ ಹೆಸರನ್ನು ಪ್ರಕಟನಾ ಫಲಕದಲ್ಲಿ ಪ್ರಕಟಿಸುತ್ತೇವೆ. ತಾವು ಕಾಲೇಜಿನ ಅಭಿವೃದ್ಧಿಗೆ 10 ಸಾವಿರ ನೀಡಲಿರುವುದಾಗಿ ಪ್ರಕಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

