ಕೋಲಾರ

ಫಲಾನುಭವಿಗಳ ಮನೆ ಬಾಗಿಲಿಗೇ ಸವಲತ್ತು

Published On :

ಬಾಗೇಪಲ್ಲಿ: ಹೋಬಳಿಗೊಂದು ವಾಹನ ವ್ಯವಸ್ಥೆ ಮಾಡಿ ಗ್ರಾಮಗಳಲ್ಲಿನ ಅರ್ಹರ ಮನೆಗಳ ಬಳಿಗೆ ಹೋಗಿ ಸ್ಥಳದಲ್ಲಿಯೇ ರೇಷನ್ ಕಾರ್ಡ್, ಪಿಂಚಣಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು. ತಾಲೂಕಿನ ರಾಶ್ಚೆರುವು ಗ್ರಾಪಂ ಆವರಣದಲ್ಲಿ ಏರ್ಪಡಿಸಿದ್ದ ಜನಸ್ಪಂಧನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ತಾಲ್ಲೂಕಿನ ಅರ್ಹ ಫಲಾನುಭವಿಗಳು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಮನೆಬಾಗಿಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಿ ಸ್ಥಳದಲ್ಲಿಯೇ ವಿತರಿಸುವ ವಿನೂತನ  ಕಾರ್ಯಕ್ರಮ 10 ದಿನಗಳಲ್ಲಿಯೇ ಪ್ರಾರಂಭಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ.ಎ. ಪಧ್ಮ, ರಾಶ್ಚೆರುವು ಗ್ರಾಪಂ ಅಧ್ಯಕ್ಷ ಹೇಮಾವತಮ್ಮ, ಪಿಡಿಒ ರಮೇಶ್, ಕಾರ್ಯದರ್ಶಿ ವೆಂಕಟಶಿವಾರೆಡ್ಡಿ, ಜಿಪಂ ಎಇಇ ಪಿ.ವಿ. ನಾಗಪ್ಪ, ಟಿಹೆಚೋ ಡಾ. ರವಿಕುಮಾರ್, ಡಿಸಿಪಿಒ ಲಕ್ಷ್ಮೀದೇವಮ್ಮ, ಬಿಇಒ ಕೆ. ವೆಂಕಟೇಶ್, ಪಿಎಸೈ ನಾರಾಯಣಸ್ವಾಮಿ, ಸತ್ಯನಾರಾಯಣಶರ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.