ಅಂಚೆ ಕಚೇರಿ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ
ಚಿಂತಾಮಣಿ: ಮುಖ್ಯ ಅಂಚೆ ಕಚೇರಿಯನ್ನು ನೆಲಮಾಳಿಗೆಗೆ ವರ್ಗಾಯಿಸಲು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಡಿಸಿಸಿ ಬ್ಯಾಂಕ್ ಹಿಂಭಾಗದ ಮುಖ್ಯ ಅಂಚೆ ಕಚೇರಿಗೆ ಹೋಗಲು ಮೆಟ್ಟಿಲು ಹತ್ತಬೇಕಿದ್ದು, ವೃದ್ಧರು ಮತ್ತು ಅಂಗವಿಕಲರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂದು ಆರೋಪಿಸಿ ಕರವೇ ಕಾರ್ಯಕರ್ತರು ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಜೊತೆಗೆ ಅಂಚೆ ಕಚೇರಿಗೆ ಬರುವ ಗ್ರಾಹಕರ ವಾಹನ ನಿಲುಗಡೆಗೆ ಸರಿಯಾದ ಸ್ಥಳಾವಕಾಶ ಇರುವ ಪಟ್ಟಣದ ಹೃದಯ ಭಾಗದಲ್ಲಿರುವ ಸೂಕ್ತ ನೆಲಮಹಡಿಗೆ ವರ್ಗಾಯಿಸಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು. ಚಿಂತಾಮಣಿ ಮಾರ್ಕೆಟ್ ಉಪ ಅಂಚೆ ಕಚೇರಿ ಸುಮಾರು 50 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಪಟ್ಟಣದ 31 ವಾರ್ಡ್ಗಳ ಒಟ್ಟು ಜನಸಂಖ್ಯೆ ಸುಮಾರು ಒಂದೂವರೆ ಲಕ್ಷದಷ್ಟಿದೆ. ಇಷ್ಟೂ ಜನರು ತಮ್ಮ ಉಳಿತಾಯ ಖಾತೆಗಳನ್ನು ಮಾರ್ಕೆಟ್ ಉಪ ಅಂಚೆ ಕಚೇರಿಯಲ್ಲಿ ಹೊಂದಿದ್ದಾರೆ. ಈ ಉಪ ಕಚೇರಿಯನ್ನು ವಿಲೀನಗೊಳಿಸಿದರೆ ವಿವಿಧ ಸಂಘ ಸಂಸ್ಥೆ ಹಾಗೂ ಸರ್ಕಾರಿ ನೌಕರರಿಗೆ ತೊಂದರೆ ಆಗಲಿದೆ.
ಆದ್ದರಿಂದ ವಿಲೀನ ಪ್ರಕ್ರಿಯೆ ಕೈಬಿಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಕರವೇ ಜಿಲ್ಲಾ ಉಪಾಧ್ಯಕ್ಷ ವಿ. ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಎನ್. ಅಂಬರೀಷ್, ನಗರ ಘಟಕದ ಅಧ್ಯಕ್ಷ ಶಬೀರ್ ಅಹಮದ್, ತಾಲೂಕು ಸಂಘಟನಾ ಕಾರ್ಯದರ್ಶಿ ಸಿ.ಡಿ. ಶಂಕರ್, ಪದಾಧಿಕಾರಿಗಳಾದ ಶ್ರೀನಿವಾಸ್, ರಮೇಶ್, ಮಂಜುನಾಥ್, ಲೋಕೇಶ್, ಮುರಳಿ ಪೋಸ್ಟ್ ಮಾಸ್ಟರ್ಗೆ ನೀಡಿದ ಮನವಿಯಲ್ಲಿ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

