ಪ್ಯಾಸೆಂಜರ್ ರೈಲು ಸಂಚಾರ
ಕೋಲಾರ: ಬೆಂಗಳೂರು-ಚಿಕ್ಕಬಳ್ಳಾಪುರ-ಕೋಲಾರ(76551ಣ52) ಹೊಸ ಪ್ಯಾಸೆಂಜರ್ ರೈಲನ್ನು ಸ್ವಾಗತಿಸುವ ಸಮಾರಂಭವನ್ನು ನ.8 ರಂದು ಮಧ್ಯಾಹ್ನ 1.30 ಗಂಟೆಗೆ ಕೋಲಾರ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನೂತನ ರೈಲು ಸೇವೆಗೆ ಕೇಂದ್ರ ರೈಲ್ವೆ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಡಾ. ಎಂ. ವೀರಪ್ಪ ಮೊಯ್ಲಿ ಹಾಗೂ ಕೇಂದ್ರ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಸಚಿವ ಕೆ.ಹೆಚ್. ಮುನಿಯಪ್ಪ ಭಾಗವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು. ರೇಲ್ವೆ ಮೂಲಗಳ ಪ್ರಕಾರ ಕೋಲಾರ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಒಟ್ಟು 10 ರೈಲು ನಿಲ್ದಾಣಗಳಿದ್ದು ಪ್ಯಾಸೆಂಜರ್ ರೈಲು ಚಿಕ್ಕಬಳ್ಳಾಪುರದಿಂದ ಭಾನುವಾರ ಹೊರತುಪಡಿಸಿ ಇನ್ನುಳಿದಂತೆ ಮಧ್ಯಾಹ್ನ 1 ಗಂಟೆಗೆ ಕೋಲಾರಕ್ಕೆ ಆಗಮಿಸಿ ಮತ್ತೆ 1.45ಕ್ಕೆ ಹೊರಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

