ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ರಸ್ತೆ ತಡೆ
ಚಿಕ್ಕಬಳ್ಳಾಪುರ: ಶಾಲಾ ಮಕ್ಕಳಿಂದ ತುಂಬಿ ತುಳುಕುತ್ತಿದ್ದ ಆಟೋ ಅಪಘಾತಕ್ಕೆ ಗುರಿಯಾಗಿ ಕೆಲವರು ಗಾಯಗೊಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಕೆಲ ಸಮಯ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಅಸಮರ್ಪಕ ಬಸ್ ಸೌಲಭ್ಯದಿಂದ ಶಾಲಾ ಕಾಲೇಜುಗಳಿಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ ಎಂದು ಆರೋಪಿಸಿದರು. ಗುಡಿಬಂಡೆ ತಾಲೂಕಿನ ಮದ್ದರೆಡ್ಡಿ ಬಳಿಯ ಸಾದಲಿ ರಸ್ತೆಯಲ್ಲಿ ವಿದ್ಯಾರ್ಥಿಗಳು ರಸ್ತೆಯ ನಡುವೆಯೇ ಕುಳಿತುಕೊಂಡು ವಾಹನಗಳನ್ನು ಸಂಚರಿಸಲು ಬಿಡಲಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಬಂದು ಬಸ್ ಸಮಸ್ಯೆ ಬಗೆಹರಿಸಬೇಕೆಂದು ಪಟ್ಟು ಹಿಡಿದರು. ಪ್ರತಿಭಟನೆಯಿಂದ ರಸ್ತೆ ಸಂಚಾರ ಸ್ಥಗಿತಗೊಂಡು ರಸ್ತೆಯುದ್ದಕ್ಕೂ ವಾಹನಗಳು ನಿಂತು ಜನರು ಪರದಾಡಬೇಕಾಯಿತು. ಪ್ರತಿಭಟನೆಯಲ್ಲಿ ಮಂಜುನಾಥ, ನಾರಾಯಣಸ್ವಾಮಿ, ಮಂಜುನಾಥರೆಡ್ಡಿ, ತಿಮ್ಮಪ್ಪ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

