ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಆಹೋರಾತ್ರಿ ಧರಣಿ
ಕ.ಪ್ರ.ವಾರ್ತೆ ಕೋಲಾರ ನ. 7
ಕಂಪನಿ ಕೃಷಿಗೆ ಅವಕಾಶ ನೀಡಬಾರದು, ಕೃಷಿ ಕೂಲಿಕಾರರ ಸಂರಕ್ಷಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹೋ ರಾತ್ರಿ ಧರಣಿ ಪ್ರಾರಂಭಿಸಿದೆ.
ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣ ತಲುಪಿ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಕೃಷಿ ರಂಗದಲ್ಲಿ ಬಂಡವಾಳ ಹೂಡಲು ವಿದೇಶಿ ಕಂಪನಿಗಳನ್ನು ರಾಜ್ಯ ಸರ್ಕಾರ ಆಹ್ವಾನಿಸಿ ಕಂಪನಿ ಕೃಷಿ, ಗುತ್ತಿಗೆ ಕೃಷಿ ಮತ್ತು ಮುಂಗಡ ವ್ಯಾಪಾರದ ಕೃಷಿಯನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಕಳವಳ ವ್ಯಕ್ತಪಡಿಸಿದರು.
ಬಗರ್ ಹುಕ್ಕುಂ ಸಾಗುವಳಿ ಭೂಮಿ ಸಕ್ರಮಕ್ಕಾಗಿ ಹಿಂದೆ ಸಲ್ಲಿಸಿರುವ ಅರ್ಜಿಗಳು ತಿರಸ್ಕೃತಗೊಂಡಿದ್ದು ಮತ್ತೆ ಅರ್ಜಿಗಳನ್ನು ಪುನರ್ ಪರಿಶೀಲನೆ ಮಾಡಬೇಕು, ಎಲ್ಲಾ ತಾಲೂಕುಗಳಲ್ಲಿ ಭೂ ಮಂಜುರಾತಿ ಸಮಿತಿಗಳನ್ನು ರಚಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡಿರುವ ಬಡವರ ಮನೆಗಳಿಗೆ ಹಕ್ಕು ಪತ್ರ ನೀಡಬೇಕು, ಪ್ರತಿ ವರ್ಷ ಅಂಬೇಡ್ಕರ್, ಆಶ್ರಯ, ಬಸವ ಮುಂತಾದ ಯೋಜನೆಗಳಲ್ಲಿ ಲಕ್ಷಾಂತರ ಮನೆಗಳನ್ನು ಮಂಜೂರು ಮಾಡುತ್ತಿದ್ದು, ಇದರಲ್ಲಿ ನಿವೇಶನ ರಹಿತರಿಗೆ ಮೊದಲು ನಿವೇಶನ ಹಂಚಿ ಮನೆ ಕಟ್ಟಲು ಸಹಾಯ ಮಾಡುವಂತೆ ಆಗ್ರಹಿಸಿದರು.
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕೃಷಿ ವಲಯಕ್ಕೆ ಸಾಕಷ್ಟು ಹಣ ಮೀಸಲಿಟ್ಟಿದ್ದರೂ ಸಣ್ಣ ರೈತರು ಮತ್ತು ಬಡವರಿಗೆ ಸಾಲ ನೀಡದೇ ಕೆಲವೇ ಶ್ರೀಮಂತ ರೈತರಿಗೆ ಮತ್ತು ಕೃಷಿ ಹೆಸರಿನಲ್ಲಿ ಬಂಡವಾಳಗಾರರಿಗೆ ಸಾಲ ಸಿಗುತ್ತಿದೆ ಎಂದು ದೂರಿದ ಪ್ರತಿಭಟನಾಕಾರರು, ಬ್ಯಾಂಕುಗಳಲ್ಲಿ ಸಾಲ ಕೇಳುವ ಎಲ್ಲಸಣ್ಣ ರೈತರಿಗೆ ಬಡವರಿಗೆ ಕೂಲಿಕಾರರಿಗೆ ಸಾಲ ಕೊಡಬೇಕು ಎಂದು ಒತ್ತಾಯಿಸಿದರು.
ಕೆಪಿಆರ್ಎಸ್ ಜಿಲ್ಲಾಧ್ಯಕ್ಷ ಪಿ.ಆರ್. ಸೂರ್ಯನಾರಾಯಣ, ಕಾರ್ಯದರ್ಶಿ ಟಿ.ಎಂ. ವೆಂಕಟೇಶ್, ಉಪಾಧ್ಯಕ್ಷ ಟಿ. ಕೃಷ್ಣೇಗೌಡ, ಪಿ.ಆರ್. ನವೀನ್ ಕುಮಾರ್, ಎನ್. ವೀರಪ್ಪರೆಡ್ಡಿ, ಕುರ್ಕಿ ದೇವರಾಜ್, ವಿ. ವೆಂಕಟೇಶಪ್ಪ, ವಿ. ನಾರಾಯಣರೆಡ್ಡಿ ಪ್ರತಿಭಟನೆಯಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

