ಶಾಸಕರಿಂದ ಅಹವಾಲು ಸ್ವೀಕಾರ
ಚಿಕ್ಕಬಳ್ಳಾಪುರ: ಸರ್ಕಾರದ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಜತೆಗೆ ಜನರ ಜವಾಬ್ದಾರಿಯು ಪ್ರಮುಖವಾಗಿದೆ ಎಂದು ಶಾಸಕ ಡಾ.ಕೆ. ಸುಧಾಕರ್ ಅಭಿಪ್ರಾಯ ಪಟ್ಟರು. ಚಿಕ್ಕಬಳ್ಳಾಪುರ ವಿಧಾನಭಾ ಕ್ಷೇತ್ರದ ಮಂಚೇನಹಳ್ಳಿ ಹೋಬಳಿಯ ಬಾಲರೆಡ್ಡಿಹಳ್ಳಿ ನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಬಾಲರೆಡ್ಡಿಹಳ್ಳಿಯಲ್ಲಿ ಎಸ್ಸಿಪಿ ಅಥವಾ ಜಿಪಂ ವತಿಯಿಂದ ಕಾಂಕ್ರಿಟ್ ರಸ್ತೆ, ದಿನ್ನೇನಹಳ್ಳಿ ಕ್ರಾಸ್ನಿಂದ ತೇಕಲಹಳ್ಳಿ, ಬಾಲರೆಡ್ಡಿಹಳ್ಳಿ, ಕಂಬಾಲಹಳ್ಳಿ ಮಾರ್ಗಕ್ಕೆ ನಬಾರ್ಡ್ ಅಥವಾ ಪಿಎಂಜಿಎಸ್ವೈ ಅಡಿ ರಸ್ತೆ ನಿರ್ಮಿಸಿಕೊಡಲಾಗುವುದು ಎಂದರು.
ಪಿ.ಎನ್. ಪ್ರಕಾಶ್ರೆಡ್ಡಿ, ಪಿ.ಎನ್. ಪೆದ್ದರೆಡ್ಡಿ, ಗ್ರಾಪಂ ಅಧ್ಯಕ್ಷೆ ಗಂಗಮ್ಮ, ಮೋಹನ್ ಕುಮಾರ್, ಪಿಡಿಒ ನಾರಾಯಣಪ್ಪ, ನಾರಾಯಣಸ್ವಾಮಿ, ಸಿದ್ದಪ್ಪ, ನಂಜುಂಡಪ್ಪ, ರಾಧಮ್ಮ ಗಂಗಾಧರಪ್ಪ, ಗೋಪಾಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

