ನೂಕುನುಗ್ಗಲು; ಲಘು ಲಾಠಿ ಪ್ರಹಾರ
ಚಿಂತಾಮಣಿ: ಹೊಸ ಪ್ಯಾಸೆಂಜರ್ ರೈಲನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಸರಿಯಾದ ಬಂದೋಬಸ್ತ್ ನೀಡದ ಕಾರಣ ಜನರು ಸುತ್ತುವರಿದು ಉಂಟಾದ ನೂಕುನುಗ್ಗಲುನಿಂದ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಪಟ್ಟಣದ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಪಟ್ಟಣದ ಅಗ್ರಹಾರದ ಬಳಿ ಇರುವ ನೂತನ ಬ್ರಾಡ್ ಗೇಜ್ ರೈಲು ಸಂಚಾರಕ್ಕೆ ಚಿಂತಾಮಣಿಯಲ್ಲಿ ಸ್ವಾಗತ ಕೋರಲು ಸಾವಿರಾರು ಜನ ಆಗಮಿಸಿದ್ದರಿಂದ ಚಿಕ್ಕಬಳ್ಳಾಪುರದಿಂದ ರೈಲಿನಲ್ಲಿ ಆಗಮಿಸಿದ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನಖರ್ಗೆ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಎಚ್. ಮುನಿಯಪ್ಪ, ಶಾಸಕರಾದ ಜೆ.ಕೆ. ಕೃಷ್ಣಾರೆಡ್ಡಿ, ರಾಜಣ್ಣ, ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ, ಮಾಜಿ ಸಚಿವ ವಿ. ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ರೈಲಿನಲ್ಲಿ ಆಗಮಿಸಿದಾಗ ನೂಕುನುಗ್ಗಲಿನಿಂದ ಅತಿಥಿಗಳಿಗೆ ಸ್ಥಳಾವಕಾಶ ಮಾಡಿಕೊಡದ ಪರಿಸ್ಥಿತಿ ಉಂಟಾಗಿ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಇದರಿಂದ ರೈಲ್ವೇ ನಿಲ್ದಾಣದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ಚಿಂತಾಮಣಿಗೆ ಆಗಮಿಸಿದ ಜನಪ್ರತಿನಿಧಿಗಳು ರೈಲಿನಿಂದ ಕೆಳಗಿಳಿದು ಶುಭ ಹಾರೈಸಿದರು.
ಪೊಲೀಸರ ನಿರ್ಲಕ್ಷ್ಯ: ಹೊಸ ಪ್ಯಾಸೆಂಜರ್ ರೈಲನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಹಲವಾರು ಗಣ್ಯರು ಆಗಮಿಸಿದಾಗ ಪೊಲೀಸರ ಕೊರತೆಯಿಂದ ಜನರನ್ನು ನಿಯಂತ್ರಿಸಲು ಪರದಾಡಬೇಕಾಯಿತು. ಪರಿಸ್ಥಿತಿ ಕೈ ಮೀರಿ ಹೋಗದಂತೆ ಪೊಲೀಸರು ಇನ್ನು ಮುಂದಾದರೂ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

