ಕೋಲಾರ

ರಾಷ್ಟ್ರದ ಹಿತಕ್ಕಾಗಿ ಯುಪಿಎ ಬೆಂಬಲಿಸಿ: ಮಲ್ಲಿಕಾರ್ಜುನ ಖರ್ಗೆ

Published On :

ಕ.ಪ್ರ.ವಾರ್ತೆ   ಕೋಲಾರ   ನ. 8
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಜನತೆಗಾಗಿ ಶ್ರಮಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲೂ ಬೆಂಬಲ, ಆಶೀರ್ವಾದ ನೀಡುವುದು ಎಲ್ಲರ ಕರ್ತವ್ಯ. ಒಂದು ವೇಳೆ ದುಡಿದಿದ್ದಕ್ಕೆ ಪ್ರತಿಫಲ ಸಿಗದಿದ್ದರೆ ದೇಶದ ಪ್ರಗತಿ ಕ್ಷೀಣಿಸುತ್ತದೆ ಎಂದು ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ನಗರದ ರೈಲು ನಿಲ್ದಾಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೆಂಗಳೂರು-ಚಿಕ್ಕಬಳ್ಳಾಪುರ-ಕೋಲಾರ ನೂತನ ಪ್ಯಾಸೆಂಜರ್ ರೈಲಿನ ಸ್ವಾಗತ ಮತ್ತು ನೂತನ ರೈಲು ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುಪಿಎ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೆ ತಂದು ಬಡವರು ಸ್ವತಂತ್ರರಾಗಿ ಮತ್ತು ಸ್ವಾವಲಂಭಿಗಳಾಗಿ ಬದುಕುವುದಕ್ಕೆ ಅನುಕೂಲ ಮಾಡಿದೆ. ಮಕ್ಕಳು ಕಡ್ಡಾಯವಾಗಿ ಶಾಲೆಗೆ ಬರಬೇಕೆಂಬ ಉದ್ದೇಶದಿಂದ ಆರ್.ಟಿ.ಇ ಜಾರಿಗೆ ತಂದಿದೆ. ಬಿಸಿಯೂಟ ಯೋಜನೆ, ಆಹಾರ ಭದ್ರತಾ ಕಾಯಿದೆ ಸೇರಿದಂತೆ ಅನೇಕ ಒಳ್ಳೆಯ ಕಾರ್ಯಕ್ರಮ ಜಾರಿಗೆ ತಂದಿರುವುದರಿಂದ ಬೇರೆಯವರು ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದು ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು.
ಕೇಂದ್ರದಿಂದ ಸಾಲಮನ್ನಾ: ಯುಪಿಎ ಸರ್ಕಾರ 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದೆ. ಈ ಕೆಲಸ ಬೇರೆ ಯಾವುದೇ ಪಕ್ಷದಿಂದ ಆಗುತ್ತಿರಲಿಲ್ಲ. ಯುಪಿಎ ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ಕ್ಷೇತ್ರಗಳ ಪೈಕಿ ಕೇವಲ 2ರಲ್ಲಿ ಮಾತ್ರ ಏಕೆ ಗೆದ್ದಿತು ಎಂಬುದು ಅರ್ಥವಾಗುತ್ತಿಲ್ಲ. ಜನಪರ ಕೆಲಸ ಮಾಡುವವರನ್ನು ಬೆಂಬಲಿಸಿ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಪರ ಮಾತನಾಡಿದರು.
ಕೋಲಾರ ಜಿಲ್ಲೆಗೆ ಹೆಚ್ಚಿನ ಅನುಕೂಲವಾಗಿರೋದು ಯುಪಿಎ ಸರ್ಕಾರದಿಂದಲೇ. ಮುಂದಿನ ಚುನಾವಣೆಯಲ್ಲೂ ಬೆಂಬಲ ನೀಡಬೇಕೆಂದು ಕರೆ ನೀಡುವ ಮೂಲಕ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆಲೋಕಸಭಾ ಚುನಾವಣಾ ಪ್ರಚಾರಕ್ಕೆ ಮುನ್ನುಡಿ ಬರೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.