ಕಾಂಗ್ರೆಸ್ ಸರ್ಕಾರ ಅಗ್ಗದ ಜನಪ್ರಿಯತೆ ಪಡೆಯುತ್ತಿದೆ: ಡಿ.ಎಸ್. ವೀರಯ್ಯ
ಶಿಡ್ಲಘಟ್ಟ: ರಾಜ್ಯದ ಕಾಂಗ್ರೆಸ್ ಸರ್ಕಾರ ಅಗ್ಗದ ಜನಪ್ರಿಯತೆಗಾಗಿ ವಿವಿಧ ಭಾಗ್ಯಗಳ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದು ಸಮಾಜವನ್ನು ಒಡೆಯುವ ಕೆಲಸದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರತವಾಗಿದೆ ಎಂದು ವಿದಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಾದಿ ಬಾಗ್ಯ, ಮೂಢನಂಬಿಕೆ ವಿರೋದಿ ಮಸೂದೆ ಮುಂತಾದ ಕಾರ್ಯಕ್ರಮಗಳ ಘೋಷಣೆಯಿಂದಾಗಿ ಸಮಾಜವನ್ನು ಒಡೆಯುವ ಕೆಲಸಕ್ಕೆ ಮುಂದಾಗಿದ್ದು ಜನರು ಬೀದಿಗಿಳಿದು ಹೋರಾಟ ಮಾಡಬೇಕಾದ ಸ್ಥಿತಿ ಬಂದಿದೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ನಡೆದ ರೈಲ್ವೆ ಉದ್ಘಾಟನಾ ಸಮಾರಂಬದಲ್ಲಿ ತಮ್ಮನ್ನು ಕೈಬಿಟ್ಟಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ರಾಜ್ಯ ಸರ್ಕಾರದ ಪ್ರತಿನಿಧಿಯಾದ ತಮಗೆ ಮಾಡಿದ ಅಪಮಾನವೆಂದು ವಿಷಾದಿಸಿದರು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಜನಪ್ರಿಯತೆಯನ್ನು ಮೊಟಕುಗೊಳಿಸಲು ರಾಜಕೀಯ ಹತಾಶೆಯಿಂದ ಕೈಗೊಂಡ ಕ್ರಮವಾಗಿದೆ ಎಂದರು.
ಹಿಂದೆ ನಡೆದ ರೈಲ್ವೆ ಅತಿಕ್ರಮಣದ ವಿರುದ್ಧದ ಹೋರಾಟದಲ್ಲಿ ತಾವು ಸಕ್ರಿಯವಾಗಿ ಪಾಲ್ಗೂಂಡಿದ್ದು, ಅಕ್ರಮವನ್ನು ತಡೆದ ಘಟನೆ ಸ್ಮರಿಸಿದ ಅವರು ಯಾವುದೇ ಸಾರ್ವಜನಿಕ ಆಸ್ತಿಯ ರಕ್ಷಣೆ ಎಲ್ಲರ ಕರ್ತವ್ಯವಾಗಿದೆ ಎಂದರು. ಶಾಶ್ವತ ನೀರಾವರಿ ಯೋಜನೆ ಜಾರಿಯ ವಿಚಾರದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ಇಬ್ಬರು ಕೇಂದ್ರ ಸಚಿವರು ಗೊಂದಲಮಯ ಹೇಳಿಕೆ ನೀಡುತ್ತಿದ್ದು ಕೇಂದ್ರ ಮಂತ್ರಿಗಳಲ್ಲಿ ಸ್ಪಷ್ಟತೆ ಇಲ್ಲ ಎಂದರು. ಡಾ. ಪರಮಶಿವಯ್ಯ ವರದಿ ಹಾಗೂ ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಬೇಕಾದ ಸಂಪನ್ಮೂಲದ ಕ್ರೋಡಿಕರಣಕ್ಕೆ ಇವರು ಕೇಂದ್ರ ಸರ್ಕಾರದ ಮೇಲೆ ಯಾವುದೇ ಒತ್ತಡ ತಂದಿಲ್ಲವೆಂದು ತಿಳಿಸಿದರು. ಹಿಂದಿನ ಬಿಜೆಪಿ ಸರ್ಕಾರ ಯೋಜನೆಯ ಸಮೀಕ್ಷೆಗಾಗಿ 1000 ಕೋಟಿ ರು.ಗಳನ್ನು ಬಿಡುಗಡೆ ಮಾಡಿದ್ದು, ಈಗಿನ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ತಾತ್ಸಾರ ಮನೋಬಾವನೆ ಹೊಂದಿದೆ ಎಂದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕಾಗಿ ತಾಲೂಕಿನಿಂದ 6,000 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 2,000 ಟಿಕೆಟ್ ಮಾರಾಟವಾಗಿದೆ ಎಂದರು. ಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಸುರೇಂದ್ರ ಗೌಡ, ರಮೇಶ್ ಬಾಯಿರಿ, ದಾಮೋದರ್, ಸುಜಾತಮ್ಮ, ಬಿ. ಕೆಂಪರೆಡ್ಡಿ, ಯುಮ ಮೋರ್ಚಾ ಅಧ್ಯಕ್ಷ ಕೊತ್ತನೂರ್ ರವಿ, ವೆಂಕಟಾಪುರ ರಾಮಚಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

