ಕೋಲಾರ

ಟ್ರಾಫಿಕ್ ಜಾಮ್: ಜನರಿಗೆ ಕಿರಿಕಿರಿ

Published On :

ಕೋಲಾರ: ನಗರದಲ್ಲಿ ರೈಲು ಸಂಚಾರ ಆರಂಭವಾಗುತ್ತಿದ್ದಂತೆ ಟೇಕಲ್ ರಸ್ತೆಯಲ್ಲಿನ ರೈಲು ಗೇಟಿನ ಬಳಿ ವಾಹನಗಳ ಸಂಚಾರ ದಟ್ಟನೆ ಹೆಚ್ಚಾಗಿರುವುದರಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.
ಕಳೆದ 15 ದಿನದಿಂದಲೂ ರೈಲುಗಳ ಪ್ರಾಯೋಜಿಕ ಓಡಾಟದ ಪರೀಕ್ಷೆಯ ಹಿನ್ನಲೆಯಲ್ಲಿ ಟೇಕಲ್ ರಸ್ತೆಯಲ್ಲಿ ವಾಹನ ಸವಾರರು ಟ್ರಾಫಿಕ್ ಜಾಮ್ ಎದುರಿಸುವಂತಾಗಿದ್ದು, ಶುಕ್ರವಾರ ರೈಲು ಉದ್ಘಾಟನಾ ಸಮಾರಂಭದ ಹಿನ್ನಲೆಯಲ್ಲಿ ಇನ್ನಷ್ಟು ಸಮಸ್ಯೆ ಎದುರಿಸಬೇಕಾಯಿತು.
ಟೇಕಲ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಲು ಕೆಳ ಸೇತುವೆ ನಿರ್ಮಿಸಬೇಕೆಂದು ಜನತೆ ಒತ್ತಾಯಿಸಿದ್ದರೂ ತಾಂತ್ರಿಕ ಕಾರಣಗಳಿಂದಾಗಿ ರೇಲ್ವೆ ಇಲಾಖೆಯವರು ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿಲ್ಲ.
ಟೇಕಲ್ ರಸ್ತೆಯ ಮೂಲಕ ಮಾಲೂರು, ಬೆಂಗಳೂರು, ಟೇಕಲ್ ಸೇರಿದಂತೆ ಅನೇಕ ಗ್ರಾಮೀಣ ಪ್ರದೇಶಗಳಿಗೆ ಬಸ್ಸು ಸೇರಿದಂತೆ ವಿವಿಧ ವಾಹನಗಳು ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಓಡಾಡುತ್ತವೆ. ಜೊತೆಗೆ ಶಾಲಾ-ಕಾಲೇಜುಗಳ ವಾಹನಗಳು ಸಂಚರಿಸುತ್ತವೆ. ರಸ್ತೆ ಅಗಲೀಕರಣದ ಕಾಮಗಾರಿ ಕಾರಣಾಂತರದಿಂದ ಸ್ಥಗಿತಗೊಂಡಿರುವುದರಿಂದಲೂ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ.
ರೇಲ್ವೆ ಇಲಾಖೆಯವರು ಕೆಳ ಸೇತುವೆ ನಿರ್ಮಾಣ ಸಾಧ್ಯವಿಲ್ಲವೆಂದು ಕೈಚಲ್ಲಿ ಕುಳಿತರೆ ಜನತೆಯ ಗೋಳು ಹೆಚ್ಚಾಗುತ್ತದೆ. ಸಮುದ್ರಕ್ಕೆ ಸೇತುವೆ ನಿರ್ಮಿಸುವ ತಂತ್ರಜ್ಞಾನ ಕಂಡುಹಿಡಿದಿರುವುದರಿಂದ ಟೇಕಲ್ ರಸ್ತೆಯಲ್ಲಿ ಕೆಳ ಸೇತುವೆ ನಿರ್ಮಾಣ ಕಷ್ಟವೇನಲ್ಲ. ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳ ಜೊತೆ ಚರ್ಚಿಸಿ ಸೂಕ್ತವಾದ ಯೋಜನೆ ಜಾರಿಗೆ ರೇಲ್ವೆ ಇಲಾಖೆಯವರು ಮುಂದಾಗದಿದ್ದರೆ ಸಕಾಲಕ್ಕೆ ಶಾಲಾ-ಕಾಲೇಜುಗಳಿಗೆ, ಪ್ರಯಾಣಿಕರು ಹಾಗೂ ನೌಕರರು ಹೋಗಲು ಕಷ್ಟವಾಗಬಹುದು ಜೊತೆಗೆ ಪ್ರತಿಭಟನೆಗೆ ಹಾದಿ ಮಾಡಿಕೊಟ್ಟಂತಾಗುತ್ತದೆ ಎಂಬುದು ಜನತೆಯ ಅಭಿಪ್ರಾಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.