ಕೋಲಾರ

ಕನ್ನಡ ಧ್ವಜಕ್ಕೆ ಅಪಮಾನ ಖಂಡಿಸಿ ಪ್ರತಿಭಟನೆ

Published On :

ಕೆಜಿಎಫ್: ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕನ್ನಡ ಧ್ವಜಕ್ಕೆ ದುಷ್ಕರ್ಮಿಗಳು ಅಪಮಾನ ಮಾಡಿರುವುದನ್ನು ಖಂಡಿಸಿ ನವಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಮುಂಭಾಗ ರಸ್ತೆತಡೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಮರಾಠಿಗರು ಹಾಗೂ ಇತರೆ ಭಾಷಿಗರ ದುಷ್ಕರ್ಮಿಗಳು ಕನ್ನಡ ನೆಲಕ್ಕೆ ಮತ್ತು ಕನ್ನಡ ಧ್ವಜಕ್ಕೆ ನಿರಂತರವಾಗಿ ಅಪಮಾನ ಮಾಡುತ್ತಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಅಥವಾ ಅಲ್ಲಿನ ಜಿಲ್ಲಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜಸ್ತಂಭ ಧ್ವಂಸಮಾಡಿ ಕನ್ನಡಿಗರ ತಾಳ್ಮೆ ಕೆದಕಲು ಅವರು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ದುಷ್ಕರ್ಮಿಗಳನ್ನು ಬಂಧಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಕೆಜಿಎಫ್ನ ವಿಶೇಷ ತಹಸೀಲ್ದಾರ್ ಇನಾಯತ್ತುಲ್ಲಾಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಚಿನ್ನಿ ವೆಂಕಟೇಶ್, ನಗರಾಧ್ಯಕ್ಷ ರಾಜ, ಉಪಾಧ್ಯಕ್ಷ ಸೋಮನಾಥ್, ದೇವರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.