ರೈತ ವಿದ್ಯಾರ್ಥಿ ವಿಭಾಗದಿಂದ ಪ್ರತಿಭಟನೆ
ಕೋಲಾರ: ರಾಜ್ಯ ರೈತ ಸಂಘದ ವಿದ್ಯಾರ್ಥಿ ಮುಖಂಡ ಹೂವಳ್ಳಿ ನಾಗರಾಜ್ ವಿದ್ಯಾರ್ಥಿ ನಿಲಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬಾರದೆಂದು ಬೆದರಿಕೆ ಹಾಕಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ವೇಮಗಲ್ನಲ್ಲಿ ಶನಿವಾರ ಮನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ಕೋಲಾರ ನಗರದ ಬೃಂದಾವನ ಸರ್ಕಲ್ ಬಳಿ ಇರುವ ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿ ನಿಲಯದ ಸಮಸ್ಯೆಗಳನ್ನು ಬಗೆಹರಿಸದೆ ಇದ್ದಾಗ ನ್ಯಾಯಕ್ಕಾಗಿ ಹೋರಾಟ ನಡೆಸಿದ ಹೂವಳ್ಳಿ ನಾಗರಾಜ್ ವಿರುದ್ಧ ಸುಳ್ಳು ಆರೋಪ ಮಾಡಿ ತೇಜೋವಧೆಗೆ ಯತ್ನಿಸಿರುವ ಜಿಪಂ ಕಾರ್ಯದರ್ಶಿ ಬದನೂರ್ ಮತ್ತು ಸಮಾಜ ಕಲ್ಯಾಣ ಅಧಿಕಾರಿ ಗುರುಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ನಾರಾಯಣಗೌಡ, ಕಲ್ಲುಮಂಜಲಿ ಶಿವಣ್ಣ, ರಾಮಾಂಜಿ, ರಾಮೂರ್ತಿ, ರಂಜಿತ್ ಕುಮಾರ್, ಸಾರತಿ ಪುರುಷೋತ್ತಮ್, ರಾಮು, ಪುರಹಳ್ಳಿ ಅಶೋಕ್, ಹೋಬಳಿ ಅಧ್ಯಕ್ಷ ಅಮರನಾರಾಯಣ, ಗಣೇಶ್, ನರಸಾಪುರ, ಮಹೇಶ್, ಮಂಜುನಾಥ್ ರೆಡ್ಡಿ, ಗೌರೀಶಂಕರ್, ರಾಮಪುರ ಮುನಿರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

