ಕಾಲುಬಾಯಿ ಜ್ವರ; ಹಸು ಸಾವು
ಚಿಂತಾಮಣಿ: ಕಾಲುಬಾಯಿ ಜ್ವರದಿಂದ ಹಸು ಮೃತಪಟ್ಟಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿರುವ ಘಟನೆ ಸೋರಪ್ಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ತಾಲೂಕಿನ ಅಂಬಾಜಿದುರ್ಗ ಹೋಬಳಿ ಸೋರಪ್ಪಲ್ಲಿ ಗ್ರಾಮದ ಉಪ್ಪರಪೇಟೆ ಪಂಚಾಯ್ತಿಯ ವಾಟರ್ ಮ್ಯಾನ್ ಮುನಿರಾಜು ಅವರ 40 ಸಾವಿರ ರುಪಾಯಿ ಬೆಲೆ ಬಾಳುವ ಹಸು ಮೃತಪಟ್ಟಿದೆ. ಪಶು ವೈದ್ಯಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ಇರುವುದರಿಂದ ರೈತರು ನಷ್ಟ ಅನುಭವಿಸುವಂತಾಗಿದೆಯೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇನ್ನು ಮುಂದಾದರೂ ಇಂತಹ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ರೈತರಿಗೆ ಅರಿವು ಮೂಡಿಸಬೇಕೆಂದು ಒತ್ತಾಯಿಸಿದ್ದಾರೆ.
ನಾಯಿಗಳ ದಾಳಿ: 20 ಕುರಿಗಳ ಸಾವು
ಚಿಂತಾಮಣಿ: ಚಿಲಕಲನೇರ್ಪು ಗ್ರಾಮದಲ್ಲಿ ಮತ್ತೆ ಬೀದಿ ನಾಯಿಗಳ ದಾಳಿಯಿಂದ 20 ಕ್ಕೂ ಹೆಚ್ಚು ಕುರಿಗಳು ಬಲಿಯಾಗಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿದ್ದಾರೆ. ಗ್ರಾಮದಲ್ಲಿ ಗುರುವಾರ ರಾತ್ರಿ ಪಿಲ್ಲರಾಮನ್ನಗಾರಿ ಬೈಯನ್ನ ಎಂಬವರಿಗೆ ಸೇರಿದ ಕುರಿಗಳ ಅಟ್ಟಿಗೆ ರಕ್ತ ರುಚಿ ಕಂಡ ನಾಯಿಗಳ ಹಿಂಡು ಎರಡನೇ ಬಾರಿಗೆ ದಾಳಿ ನಡೆಸಿದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಜೊತೆಗೆ ಡಿಲ್ಲಿ ವೆಂಕಟರಾಯಪ್ಪ ಎಂಬವರಿಗೆ ಸೇರಿದ ಕುರಿಗಳ ಅಟ್ಟಿಗೆ ನುಗ್ಗಿ 2 ಕುರಿಗಳು ಸಾವನ್ನಪ್ಪಿ, ಇನ್ನೂ ಹಲವು ಸಾವುನೋವಿನ ಜೊತೆ ಹೋರಾಟ ನಡೆಸುತ್ತಿವೆ ಎಂದು ನೊಂದ ರೈತರು ತಿಳಿಸಿದ್ದಾರೆ. ಕಳೆದ ಬುಧವಾರ ರಾತ್ರಿ ನರಸಿಂಹಪ್ಪ ಎಂಬವರಿಗೆ ಸೇರಿದ 9 ಕುರಿಗಳನ್ನು ನಾಯಿಗಳು ಕಚ್ಚಿ ಸಾಯಿಸಿದ್ದ ಪ್ರಕರಣ ನಡೆದಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

